ರಾಮನಗರ: ‘ಚನ್ನಪಟ್ಟಣ ಉಪ ಚುನಾವಣೆಯ ಟಿಕೆಟ್ ಆಕಾಂಕ್ಷಿ ಬಿಜೆಪಿಯ ಸಿ.ಪಿ. ಯೋಗೇಶ್ವರ್ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಚಿಹ್ನೆಯಡಿ ಕಣಕ್ಕಿಳಿಸಲು ಪಕ್ಷದ ನಾಯಕರು ತೀರ್ಮಾನಿಸಿದ್ದರು. ಆರಂಭದಲ್ಲಿ ಸ್ಪರ್ಧೆಗೆ ಒಪ್ಪಿದ್ದ ಯೋಗೇಶ್ವರ್, ಈಗ ವರಸೆ ಬದಲಿಸಿ ಬಿಜೆಪಿ ಟಿಕೆಟ್ಗೆ ಪಟ್ಟು ಹಿಡಿದಿದ್ದಾರೆ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಎ. ಮಂಜುನಾಥ್ ಹೇಳಿದರು.

‘ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು, ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷದ ಕೋರ್ ಕಮಿಟಿ ಸದಸ್ಯರು ಸಭೆ ನಡೆಸಿ ಯೋಗೇಶ್ವರ್ ಅವರನ್ನೇ ಅಂತಿಮಗೊಳಿಸಿದ್ದರು. ಆದರೆ, ಅವರು ನಮ್ಮ ಪಕ್ಷದ ಆಹ್ವಾನ ತಿರಸ್ಕರಿಸಿದ್ದಾರೆ’ ಎಂದು ನಗರದ ಖಾಸಗಿ ಹೋಟೆಲ್ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಸ್ಪರ್ಧೆಗೆ ಯೋಗೇಶ್ವರ್ ನಿರಾಕರಿಸುವುದರಿಂದ ನಿಖಿಲ್ ಅವರನ್ನೇ ಪಕ್ಷದಿಂದ ಕಣಕ್ಕಿಳಿಸಬೇಕೆಂಬ ಒತ್ತಡ ಹೆಚ್ಚಾಗುತ್ತಿದೆ. ನಿಖಿಲ್ ಒಪ್ಪದಿದ್ದರೆ ಪ್ರಬಲವಾಗಿರುವ ಪಕ್ಷದ ಸ್ಥಳೀಯ ಮುಖಂಡರೊಬ್ಬರನ್ನು ಅಭ್ಯರ್ಥಿ ಮಾಡುವ ಆಲೋಚನೆ ಇದೆ. ಈ ಕುರಿತು, ಪಕ್ಷದ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
.ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿ.ಪಿ. ಯೋಗೇಶ್ವರ್.ಉಪ ಚುನಾವಣೆ: ಚನ್ನಪಟ್ಟಣದಿಂದ ಸ್ಪರ್ಧಿಸುವುದು ಖಚಿತ ಎಂದ ಸಿ.ಪಿ. ಯೋಗೇಶ್ವರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.