ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Video | ಏಳು ಜನುಮ ಎತ್ತಿ ಬಂದರೂ ರಾಮನಗರ ಛಿದ್ರ ಮಾಡಲು ಸಾಧ್ಯವಿಲ್ಲ: ಎಚ್‌ಡಿಕೆ

Published 25 ಅಕ್ಟೋಬರ್ 2023, 16:01 IST
Last Updated 25 ಅಕ್ಟೋಬರ್ 2023, 16:01 IST
ಅಕ್ಷರ ಗಾತ್ರ

ಬಡವರ ಹೊಟ್ಟೆ ಮೇಲೆ ಹೊಡೆಯುವ, ಕಂಡೋರ ಭೂಮಿಗೆ ಬೇಲಿ ಹಾಕುವ, ಬೆಟ್ಟಗುಡ್ಡಗಳನ್ನು ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ, ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ ದುಷ್ಟ ಪ್ರಜ್ಞೆ ಅತಿ ಬುದ್ಧಿವಂತಿಕೆ ಅಸಾಮಾನ್ಯ ಜ್ಞಾನ ಖಂಡಿತವಾಗಿಯೂ ನನಗಿಲ್ಲ. ಅದು ನನಗೆ ಬೇಕಾಗಿಯೂ ಇಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಅವರಿಗೆ ಸಾಮಾನ್ಯ ಜ್ಞಾನ ಇಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು ಈ ಜನ್ಮವಷ್ಟೇ ಅಲ್ಲ ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ ಎಂದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT