ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸೇರಿದ್ದು ಎನ್ನಲಾದ ಸಿ.ಡಿ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥ ಸೌಮೇಂದು ಮುಖರ್ಜಿ ಅವರ ರಜೆ ಅವಧಿಯನ್ನು ಮತ್ತೊಂದು ತಿಂಗಳು ವಿಸ್ತರಿಸಲಾಗಿದೆ.

ನಗರದ ಹೆಚ್ಚುವರಿ ಪೊಲೀಸ್ ಕಮಿಷನರ್ ಸಹ ಆಗಿರುವ ಸೌಮೆಂದು, ಕಬ್ಬನ್ ಪಾರ್ಕ್ ಹಾಗೂ ಸದಾಶಿವನಗರ ಠಾಣೆಗಳಲ್ಲಿ ಪ್ರಕರಣ ದಾಖಲಾದ ದಿನದಿಂದಲೂ ತನಿಖೆ ಹೊಣೆ ಹೊತ್ತಿದ್ದರು. ಪ್ರಕರಣದಲ್ಲಿ ಹಲವು ತಿರುವುಗಳು ಸಿಕ್ಕಿದ್ದವು.

ಇದರ ನಡುವೆಯೇ, ಕುಟುಂಬದವರ ಆರೋಗ್ಯ ಸಮಸ್ಯೆ ಕಾರಣ ನೀಡಿ ಸೌಮೇಂದು ರಜೆ ಪಡೆದಿದ್ದರು. ಇದೀಗ ಪುನಃ ರಜೆ ಅವಧಿಯನ್ನು ವಿಸ್ತರಿಸಿಕೊಂಡಿದ್ದಾರೆ. ಹೀಗಾಗಿ, ತನಿಖೆ ಜವಾಬ್ದಾರಿಯನ್ನು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಅವರಿಗೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.