ಬೆಂಗಳೂರು: ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ತನಿಖೆ ನಡೆಸುತ್ತಿರುವ ಎನ್ಐಎ ಹಾಗೂ ಸಿಸಿಬಿ ಪೊಲೀಸರ ತಂಡಗಳು, ಬೆಂಗಳೂರು ಹಾಗೂ ಶಿವಮೊಗ್ಗದ ತೀರ್ಥಹಳ್ಳಿಯ ಹಲವು ಸ್ಥಳಗಳ ಮೇಲೆ ದಾಳಿ ಮಾಡಿವೆ.

ಪ್ರಕರಣ ಸಂಬಂಧ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ತನಿಖಾ ಅಧಿಕಾರಿಗಳು, ಲಭ್ಯವಾದ ಮಾಹಿತಿ ಆಧರಿಸಿ ಬುಧವಾರ ನಸುಕಿನಲ್ಲೇ ಹಲವೆಡೆ ದಾಳಿ ಮಾಡಿದ್ದಾರೆ.

ಐಎಸ್ ಜೊತೆ ನಂಟು ಹೊಂದಿದ್ದ ಶಂಕಿತರು, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದರು. ಬೆಂಗಳೂರಿನ ಗುರಪ್ಪನಪಾಳ್ಯದಲ್ಲೂ ಶಂಕಿತರು ಸಭೆ ನಡೆಸಿದ್ದರು.

ಇದೇ ಗುರಪ್ಪನಪಾಳ್ಯದ ಕೆಲವರ ಮನೆಗಳ ಮೇಲೆ ಅಧಿಕಾರಗಳು ಗುರುವಾರ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿಯಲ್ಲೂ ಹಲವರ ಮನೆಯಲ್ಲಿ ಶೋಧ ನಡೆಯುತ್ತಿದೆ ಎಂದು ಮೂಲಗಳು ಹೇಳಿವೆ.
.ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಗುರಪ್ಪನಪಾಳ್ಯದಲ್ಲಿ ಶಂಕಿತರ ಸಭೆ.ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಬಾಂಬ್ ಇಟ್ಟವನ ಗುರುತು ಪತ್ತೆ ಮಾಡಿದ ಎನ್ಐಎ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.