ಬೆಂಗಳೂರು: ರಾಮೇಶ್ವರ ಕೆಫೆ ಹೋಟೆಲ್‌ನಲ್ಲಿ ನಡೆದ ಸ್ಫೋಟ ಪ್ರಕರಣದ ತನಿಖೆಯನ್ನು ಎನ್‌ಐಎ ಮತ್ತು ಎನ್‌ಎಸ್‌ಜಿ ಅಧಿಕಾರಿಗಳು ಮಾಡುತ್ತಿದ್ದಾರೆ. ಸ್ಪೋಟದ ರೀತಿಯನ್ನು ಗಮನಿಸಿರುವ ಎನ್‌ಐಎ ಅಧಿಕಾರಿಗಳಿಗೆ, ಯಾವ ಸಂಘಟನೆಯವರು ಮಾಡಿರಬಹುದು ಎಂಬ ಅಂದಾಜು ಇರುತ್ತದೆ. ಶೀಘ್ರದಲ್ಲಿ ಆರೋಪಿಗಳನ್ನು ಹಿಡಿಯುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಮಂಗಳೂರಿನಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಪೋಟದ ರೀತಿಯಲ್ಲಿಯೇ ಈ ಪ್ರಕರಣದಲ್ಲಿಯೂ ಸ್ಪೋಟದ ವಸ್ತುಗಳನ್ನು ಜೋಡಿಸಿರುವ ತಾಂತ್ರಿಕ ಸಾಮ್ಯತೆ ಕಂಡು ಬರುತ್ತಿದೆ' ಎಂದರು.

ಬ್ಯಾಟರಿ ಬಳಕೆ, ಟೈಮರ್ ಇನ್ನಿತರ ಗಮನಿಸಿದರೆ ತಾಂತ್ರಿಕವಾಗಿ ಅದೇ ರೀತಿ ಜೋಡಿಸಿದ್ದಾರೆ. ಒಂದೇ ತರ ಕಾಣಿಸುತ್ತಿದೆ. ಇಂಥದ್ದೇ ಸಂಘಟನೆಯವರು ಮಾಡಿದ್ದಾರೆ ಎಂಬುದನ್ನು ಈಗಲೇ ಹೇಳಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

'ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ನಾನು ಅಥವಾ ಗೃಹ ಇಲಾಖೆಯ ಅಧಿಕಾರಿಗಳು ಹೇಳಿದರೆ ಮಾತ್ರ ಅಧಿಕೃತ ಮಾಹಿತಿ ಅಂತ ಪರಿಗಣಿಸಬೇಕು. ಬಹಳ ಜನ ಪ್ರಕರಣದ ಕುರಿತು ಸ್ಪಷ್ಟ ಮಾಹಿತಿ ಇಲ್ಲದೆ ಹೇಳಿಕೆ ನೀಡುತ್ತಿರುವುದರಿಂದ ಗೊಂದಲವಾಗುತ್ತಿದೆ. ನಾವು ಹೇಳಿಕೆ ನೀಡುವಾಗ ಅನೇಕ ಮಾಹಿತಿಯನ್ನು ಇಟ್ಟುಕೊಂಡು ಹೇಳಿರುತ್ತೇವೆ ಎಂದರು.

ಸ್ಪೋಟದ ತೀವ್ರತೆ ಬಹಳ ಕಡಿಮೆ ಇರುವುದು ಪರೀಶೀಲನೆಯಲ್ಲಿ ಕಂಡುಬಂದಿದೆ. ಹೀಗಾಗಿ ದೊಡ್ಡ ಅನಾಹುತ ಆಗಿಲ್ಲ. ಬಳಕೆಯಾದ ಸ್ಪೋಟಕ ವಸ್ತುಗಳು ಕಡಿಮೆ ಇರಬಹುದು. ಹೆಚ್ಚು ಬಳಕೆ ಮಾಡಿದ್ದರೆ ಸ್ಪೋಟದ ತೀವ್ರತೆ ಜಾಸ್ತಿ ಆಗುತ್ತಿತ್ತು. ಬಾಂಬ್ ಸಿಡಿದಾಗ ಮೊಳೆಗಳು, ನೆಟ್‌ಗಳು ಎಲ್ಲವೂ ಮೇಲೆ ಹೋಗಿವೆ. ಅದು ಮೇಲೆ ಹೋಗದೆ ಸೈಡಿಗೆ ಸಿಡಿದಿದ್ದರೆ ಬಹಳ ಜನರಿಗೆ ಪ್ರಾಣಾಪಾಯ ಆಗುತಿತ್ತು. ಅದೃಷ್ಟವಶಾತ್ ಮೊಳೆಗಳು ಮೇಲೆ ಹೋಗಿವೆ ಎಂದು ತಿಳಿಸಿದರು.

26 ಬಸ್‌ಗಳಲ್ಲಿನ ಕ್ಯಾಮೆರಾ ಪರಿಶೀಲನೆ: ಬೆಂಗಳೂರು ನಗರವನ್ನು ಸುರಕ್ಷಿತ ನಗರ ಮಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ನಮ್ಮ ಸರ್ಕಾರ ಸೇಫ್ ಸಿಟಿ ಮಾಡಿ ಬಹಳ ಹಣ ಖರ್ಚು ಮಾಡಿ, ಕ್ಯಾಮೆರಾ ಹಾಕಿದ್ದೇವೆ. ಕಮಾಂಡ್ ಸೆಂಟರ್ ಮಾಡಿ ಎಲ್ಲವನ್ನು ಮಾನಿಟರ್ ಮಾಡ್ತಿದ್ದೇವೆ. ಬೆಂಗಳೂರು ಈಗ ಸುರಕ್ಷತೆಯಲ್ಲಿ ಎಷ್ಟೋ ಉತ್ತಮವಾಗಿದೆ. ಸ್ಥಳದ ಸುತ್ತ ಮುತ್ತಲಿನ 40ಕ್ಕೂ ಹೆಚ್ಚು ಸಿಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಸ್ಪೋಟದ ಸಂದರ್ಭದಲ್ಲಿ 26 ಬಸ್‌ಗಳು ಸಂಚರಿಸಿವೆ. 26 ಬಸ್‌ಗಳಲ್ಲಿನ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ. ಪ್ರಕರಣ ತನಿಖೆ ಹಂತದಲ್ಲಿರುವುದರಿಂದ ತಾಂತ್ರಿಕ ವಿಚಾರಗಳ ಬಗ್ಗೆ ಹೇಳುವುದಿಲ್ಲ ಎಂದು ತಿಳಿಸಿದರು.

ರಕ್ಷಣೆ ಮಾಡುವ ಪ್ರಸಂಗವಿಲ್ಲ: ವಿಧಾನಸೌಧ ಆವರಣದಲ್ಲಿ ನಡೆದ ಘಟನೆಯ ಕುರಿತು ಮಾತನಾಡಿದ ಅವರು, ಎಫ್‌ಎಸ್‌ಎಲ್‌ನವರು ತಾಂತ್ರಿಕ ವರದಿ ನೀಡಬೇಕು. ಒಂದರೆಡು ದಿನದಲ್ಲಿ ವರದಿ ಕೊಡಲು ಆಗಲ್ಲ. ನಾನು ಯಾವತ್ತು 48 ಗಂಟೆಯಲ್ಲಿ ಎಫ್‌ಎಸ್‌ಎಲ್ ವರದಿ ಬರುತ್ತದೆ ಎಂದು ಹೇಳಿಲ್ಲ. ಸಾಕಷ್ಟು ವಿಡಿಯೋಗಳಿರುತ್ತವೆ. ಅದೆಲ್ಲವನ್ನು ಪರಿಶೀಲಿಸಬೇಕು. ಈ ಪ್ರಕರಣಕ್ಕೆ ಹೆಚ್ಚು ಒತ್ತು ನೀಡುವಂತೆ ಘಟನೆ ನಡೆದ ದಿನವೆ ಸೂಚನೆ ನೀಡಿದ್ದೇನೆ. ವರದಿ ಬಂದ ತಕ್ಷಣ ಮುಂದಿನ ಕ್ರಮ ಜರುಗಿಸಲಾಗುವುದು. ಯಾರನ್ನು ರಕ್ಷಣೆ ಮಾಡುವ ಪ್ರಸಂಗವಿಲ್ಲ ಎಂದು ಸ್ಪಷ್ಟಪಡಿಸಿದರು.

ಎಫ್‌ಎಸ್‌ಎಲ್ ವರದಿ ಮುಚ್ಚಿಡುವ ಪ್ರಶ್ನೆಯೇ ಬರುವುದಿಲ್ಲ. ಬಿಜೆಪಿಯರು ಅವರ ಅಧಿಕಾರದ ಅವಧಿಯಲ್ಲಿ ಏನು ಮಾಡಿದ್ದಾರೆ ಎಂಬುದು ಗೊತ್ತಿದೆ. ನಾನು ಹೇಳಿದರೆ ಸುಮ್ಮನೆ ರಾಜಕೀಯ ಆಗುತ್ತೆ. ಮಂಗಳೂರಲ್ಲಿ ಕುಕ್ಕರ್ ಸ್ಫೋಟ ಆದಾಗ ಯಾರು ಅಧಿಕಾರದಲ್ಲಿದ್ದರು? 2008ರಲ್ಲಿ ಸರಣಿ ಸ್ಪೋಟ ಆದಾಗ ಯಾರು ಇದ್ದರು. ಹೇಳಬೇಕು ಅಂದ್ರೆ ನಾವು ಹೇಳ್ತೀವಿ ಆದ್ರೆ ಅವಶ್ಯಕತೆ ನನಗೆ ಇಲ್ಲ. ಇದು ಬೆಂಗಳೂರು ಮತ್ತು ಕರ್ನಾಟಕದ ಪ್ರಶ್ನೆ. ಇದರಲ್ಲಿ ರಾಜಕೀಯ ಬೇಡ ಎಂದು ಹೇಳಿದರು

ಶ್ರೀರಾಮ ಬಿಜೆಪಿಯವರ ಆಸ್ತಿಯಲ್ಲ: ರಾಮ ಮಂದಿರ ಉದ್ಘಾಟನೆ ಬಳಿಕ ರಾಮ ಅನ್ನೋ ಹೆಸರು ಟಾರ್ಗೆಟ್ ಆಗುತ್ತಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ಪದೇ ಪದೇ ಹೇಳುತ್ತಿದ್ದೇವೆ. ಶ್ರೀರಾಮ ಎಲ್ಲರಿಗೂ ಶ್ರೀರಾಮ. ಬಿಜೆಪಿ ಅವರು ಎಲ್ಲಾದರೂ ಖರೀದಿಸಿದ್ದಾರೆಯೇ. ಅದಕ್ಕೆ ಎಷ್ಟು ಹಣ ಆಯ್ತೋ ನಮಗೆ ಗೊತ್ತಿಲ್ಲ. ಬಿಜೆಪಿ ಅವರಿಗೆ ದುಡ್ಡು ಕೊಟ್ಟು ಕೊಂಡುಕೊಳ್ಳೋ ಅಭ್ಯಾಸ ಇದೆ. ಹೀಗಾಗಿ ಶ್ರೀರಾಮನನ್ನ ಕೊಂಡು ಕೊಂಡಿದ್ದರೆಯೇ ನನಗೆ ಗೊತ್ತಿಲ್ಲ. ನಾನು ಸಣ್ಣವನಿದ್ದಾಗ ಶ್ರೀರಾಮ ನವಮಿ ದಿನ ಪಾನಕ, ಕೋಸಂಬರಿ, ಮಜ್ಜಿಗೆ ಹಂಚಿದ್ದೇನೆ. ನಮಗೆ ಅಂತಹ ರಾಮ ಬೇಕು. ಶ್ರೀರಾಮ ಬಿಜೆಪಿಯವರ ಆಸ್ತಿಯಲ್ಲ. ಈ ದೇಶದ ಸಂಸ್ಕೃತಿ, ಪರಂಪರೆಯ ಆಸ್ತಿ ಎಂದರು.
.ರಾಮೇಶ್ವರಂ ಕೆಫೆ ಸ್ಫೋಟ: ಸಂಘಟನೆ ಕೈವಾಡ.ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಅಗತ್ಯ ಬಿದ್ದರೆ ಮಾತ್ರ ಎನ್ಐಎಗೆ– ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.