ಬೆಂಗಳೂರು: ಮಹಿಳೆಯ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದ ಕ್ರಿಮಿನಲ್ ಪ್ರಕರಣಗಳಲ್ಲಿ ಜಾಮೀನು ಕೋರಿರುವ ಮಾಜಿ ಸಂಸದ ಪ್ರಜ್ವಲ್ ಅವರ ರೇವಣ್ಣ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಇದೇ 12ಕ್ಕೆ ಮುಂದೂಡಿದೆ.

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಮತ್ತು ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ದಾಖಲಾಗಿರುವ ಮತ್ತೆರಡು ಪ್ರತ್ಯೇಕ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿರುವ ಪ್ರಜ್ವಲ್ ಅವರ ಅರ್ಜಿಗಳನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸೋಮವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ, ‘ಹೊಳೆನರಸೀಪುರದಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಆದರೆ, ಅದರ ಪ್ರತಿಯನ್ನು ನಮಗೆ ನೀಡಿಲ್ಲ. ದೋಷಾರೋಪ ಪಟ್ಟಿ ಬದಿಗಿರಿಸಿ ಗಮನಿಸಿದರೆ ಪ್ರಜ್ವಲ್ ವಿರುದ್ದದ ಎಲ್ಲ ಆರೋಪಗಳೂ ಜಾಮೀನು ನೀಡಬಹುದಾದ ಆರೋಪಗಳಾಗಿವೆ’ ಎಂದರು.

ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ರವಿವರ್ಮ ಕುಮಾರ್, ‘ಸಂತ್ರಸ್ತೆಯರ ಗೌರವ ಮತ್ತು ಘನತೆಯ ದೃಷ್ಟಿಯಿಂದ ಪ್ರಕರಣವನ್ನು ಇನ್ ಕ್ಯಾಮರಾ ವಿಚಾರಣೆಗೆ ಒಳಪಡಿಸುವ ಬಗೆಗಿನ ಮನವಿಯನ್ನು ಪರಿಗಣಿಸಬೇಕು’ ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಇನ್ ಕ್ಯಾಮರಾ ವಿಚಾರಣೆಗೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ನೀಡಿರುವ ದೋಷಾರೋಪ ಪಟ್ಟಿಯನ್ನು ಪರಿಶೀಲಿಸಿ, ಮುಖ್ಯ ನ್ಯಾಯಮೂರ್ತಿಗಳಿಂದ ಸೂಕ್ತ ಆದೇಶ ಪಡೆದುಕೊಳ್ಳಲಾಗುವುದು’ ಎಂದು ಮೌಖಿಕವಾಗಿ ತಿಳಿಸಿ ವಿಚಾರಣೆಯನ್ನು ಇದೇ 12ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.