ಬೆಂಗಳೂರು: ‘ಅನ್ನಭಾಗ್ಯ’ ಯೋಜನೆಯಡಿ ವಿತರಿಸುವ ಪಡಿತರವನ್ನು 75 ವರ್ಷ ದಾಟಿದವರ ಮನೆ ಬಾಗಿಲಿಗೇThe house is big 'Syey ngiw tep.'ತಲುಪಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ಕೋರಿಕೆಯಷ್ಟು ಅಕ್ಕಿಯನ್ನು ಎಫ್‌ಸಿಐ ನಿಗದಿಪಡಿಸಿದ ದರದಲ್ಲಿ (ಪ್ರತಿ ಕೆ.ಜಿಗೆ ₹ 34) ಪೂರೈಸಲು ಛತ್ತೀಸಗಢ ಮತ್ತು ತೆಲಂಗಾಣ ರಾಜ್ಯ ಸರ್ಕಾರಗಳು ಒಪ್ಪಿಗೆ ನೀಡಿವೆ. ಇದೇ ತಿಂಗಳಿನಿಂದ ನಗದು ಬದಲು ಪೂರ್ಣ ಪ್ರಮಾಣದಲ್ಲಿ ಅಕ್ಕಿ ಪೂರೈಸಲು ನಿರ್ಧರಿಸಿರುವ ಇಲಾಖೆ, ಪಡಿತರ ವಿತರಣೆಯಲ್ಲಿ ಹಿರಿಯ ನಾಗರಿಕರಿಗೆ ಅನುಕೂಲ ಮಾಡಿಕೊಡಲು ಮತ್ತೊಂದು ನಿರ್ಧಾರ ತೆಗೆದುಕೊಂಡಿದೆ. ಅದಕ್ಕಾಗಿ ಹಿರಿಯ ನಾಗರಿಕಸ್ನೇಹಿ ನೀತಿ ಪರಿಚಯಿಸುತ್ತಿದೆ.

ಇದುವರೆಗೂ ಪಡಿತರ ಕಾರ್ಡ್ ಹೊಂದಿರುವ ಕುಟುಂಬದ ಯಾರಾದರೂ ಒಬ್ಬ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಅಥವಾ ಅನ್ನಭಾಗ್ಯ ಪಡಿತರ ವಿತರಣಾ ಕೇಂದ್ರಗಳಿಗೆ ತೆರಳಿ ಬಯೊಮೆಟ್ರಿಕ್ ನೀಡಿದ ನಂತರ ತಮ್ಮ ಕುಟುಂಬಕ್ಕೆ ನಿಗದಿಪಡಿಸಿದ ಅಕ್ಕಿ ಮತ್ತಿತರ ಪಡಿತರ ಪಡೆಯಬೇಕಿತ್ತು. ವಯಸ್ಸಾದವರು ಪಡಿತರ ಕೇಂದ್ರಗಳಿಗೆ ಹೋಗಲು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದರು. ಇಂತಹ ಸಮಸ್ಯೆಗಳಿಗೆ ಕೊನೆ ಹಾಡಲು ‘ಮನೆ ಬಾಗಿಲಿಗೆ ಪಡಿತರ’ ಯೋಜನೆ ರೂಪಿಸಲಾಗಿದೆ.

ಒಂಟಿ ಕುಟುಂಬಕ್ಕೆ ಮೊದಲ ಪ್ರಾಶಸ್ತ್ಯ:

ಮನೆ ಬಾಗಿಲಿಗೆ ಪಡಿತರ ವಿತರಿಸಬೇಕಾದರೆ ಅವರ ಕುಟುಂಬದಲ್ಲಿ (ಪಡಿತರ ಚೀಟಿಯಲ್ಲಿ ನಮೂದಿಸಿದಂತೆ) 75ರ ಒಳಗಿನ ಇತರೆ ಸದಸ್ಯರು ಇರಬಾರದು. ಇದ್ದರೆ, ಅವರು ವಿತರಣಾ ಕೇಂದ್ರಗಳಿಗೆ ಬಂದು ಪಡಿತರ ಪಡೆಯಬೇಕು ಎಂಬ ಷರತ್ತು ವಿಧಿಸಲಾಗಿದೆ. ಒಂಟಿ ವೃದ್ಧರು, 75 ದಾಟಿದ ದಂಪತಿಗಳ ಪ್ರತ್ಯೇಕ ಪಟ್ಟಿಯನ್ನು ಆಹಾರ ಇಲಾಖೆ ಈಗಾಗಲೇ ಸಿದ್ಧಪಡಿಸಿದೆ. ಒಂದು ವೇಳೆ ತಮ್ಮ ಕುಟುಂಬದ ಇತರೆ ಸದಸ್ಯರು ಬೇರೆ ಪ್ರದೇಶಗಳಿಗೆ ತೆರಳಿದ್ದರೆ, ಅಂತಹ ಸಮಯದಲ್ಲಿ ಊರಲ್ಲೇ ಉಳಿದ ವೃದ್ಧರು ಮನೆ ಬಾಗಿಲಿಗೇ ಪಡಿತರ ನೀಡುವಂತೆ ಕೋರಿಕೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

‘ಮನೆಬಾಗಲಿಗೆ ಪಡಿತರ ನೀಡುವುದು ಅತ್ಯಂತ ಪ್ರಯೋಜನಕಾರಿ. ಸಂಚಾರ ದಟ್ಟಣೆ ಅಥವಾ ವಯಸ್ಸಿನ ಕಾರಣಕ್ಕೆ ನ್ಯಾಯಬೆಲೆ ಅಂಗಡಿಗೆ ಹೋಗಲು ಸಾಧ್ಯವಾಗದೆ, ಕೆಲವೊಮ್ಮೆ ಸರದಿಯಲ್ಲಿ ನಿಲ್ಲಲು ಆಗದೇ ಕೆಲ ತಿಂಗಳು ಪಡಿತರವನ್ನೇ ಪಡೆಯಲಿಲ್ಲ. ಸರ್ಕಾರದ ಈ ನಿರ್ಧಾರ ತುಂಬಾ ಉಪಕಾರಿಯಾಗಿದೆ’ ಎನ್ನುತ್ತಾರೆ ಬೆಂಗಳೂರು ಎಂ.ಸಿ. ಲೇಔಟ್‌ನ 90 ವರ್ಷದ ನಾಗರಿಕ ರತ್ನಾಕರ ಶೆಣೈ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.