ಬೆಂಗಳೂರು: ಶಾಲೆ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಪ್ರತಿದಿನ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯ ಮಾಡಿ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರು ಹೇಳಿದರು.

ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲೆ, ಕಾಲೇಜು, ವಿವಿಗಳಲ್ಲಿ ಪ್ರತಿದಿನ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯ ಮಾಡಲಾಗಿದೆ. ಸರ್ಕಾರಿ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ಇದು ಅನ್ವಯವಾಗಲಿದೆ ಎಂದರು.

ಪ್ರತಿ ದಿನ ಯುವ ಜನರು ಸಂವಿಧಾನದ ಪೀಠಿಕೆ ಓದಬೇಕು ಎಂದು ಐತಿಹಾಸಿಕ ತೀರ್ಮಾನ ಮಾಡಲಾಗಿದೆ. ಪ್ರಾರ್ಥನೆ ಬಳಿಕ ಕಡ್ಡಾಯವಾಗಿ ಓದಬೇಕು ಎಂದು ಅವರು ತಿಳಿಸಿದರು.

ಜತೆಗೆ ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆಯ ಫೋಟೋ ಹಾಕಬೇಕು ಎಂದು ಅವರು ಹೇಳಿದರು.

ಈ ಹಿಂದಿನ ಸರ್ಕಾರ ಪಠ್ಯದಲ್ಲಿ ಸೇರಿಸಿದ್ದ ಬಲಪಂಥೀಯ ನಾಯಕರ ಪಠ್ಯ ತೆಗೆದು ಹಾಕುವುದು, ಮತಾಂತರ ನಿಷೇಧ ಕಾಯ್ದೆ ರದ್ದು ಸೇರಿದಂತೆ ಹಲವು ತೀರ್ಮಾನಗಳನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.