ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2023-24ನೇ ಸಾಲಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ಅನುಮತಿ ನೀಡಿದ್ದು, ಅರ್ಜಿ ಸಲ್ಲಿಕೆಗೆ ಸೆ.2ರವರೆಗೆ ಅವಕಾಶ ನೀಡಲಾಗಿದೆ.

ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳೂ ಸೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಕಾಯಂ ಅಧ್ಯಾಪಕರಿಗೆ ಬೋಧನಾ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಯುವ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಸೂಚಿಸಲಾಗಿದೆ.

ನಿಯಮಗಳ ಪ್ರಕಾರ ಅತಿಥಿ ಉಪನ್ಯಾಸಕರಾಗಲು ಅರ್ಹತೆ ಇರುವವರು ಆ.25ರಿಂದಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸೆ.4ರಂದು ಮೆರಿಟ್ ಪಟ್ಟಿ ಪ್ರಕಟಿಸಲಗುವುದು. ಸೆ.11ರಿಂದ 15ರವರೆಗೆ ಕಾಲೇಜುಗಳ ಆಯ್ಕೆಗೆ ಕೌನ್ಸೆಲಿಂಗ್ ನಡೆಸಲಾಗುವುದು. 16ರಂದು ಆಯ್ಕೆಯಾದವರ ಅಂತಿಮಪಟ್ಟಿ ಪ್ರಕಟಿಸಲಾಗುವುದು ಎಂದು ಇಲಾಖೆ ಹೇಳಿದೆ.

ಯಾವುದೇ ಕಾಲೇಜುಗಳಲ್ಲಿ ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಹುದ್ದೆಗಳು ಖಾಲಿ ಇದ್ದರೆ ಅತಿಥಿ ಉಪನ್ಯಾಸಕರ ನಿಯಮದಂತೆ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.