ಕಲಬುರ್ಗಿ: ‘ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಕಾನೂನು ವ್ಯಾಪ್ತಿ ಮೀರಿ ಕೆಲಸ ಮಾಡಲು ಕೆಲವರು ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ವಿಶ್ವವಿದ್ಯಾಲಯದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ನನಗೆ ಪೊಲೀಸ್ ರಕ್ಷಣೆ ನೀಡಬೇಕು’ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಸಿ.ಸೋಮಶೇಖರ್ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.

ಪೊಲೀಸ್ ಕಮಿಷನರ್ ಸತೀಶ ಕುಮಾರ್ ಎನ್. ಅವರನ್ನು ಇತ್ತೀಚೆಗೆ ಖುದ್ದು ಭೇಟಿ ಮಾಡಿದ ಅವರು, ‘ಸಿಬ್ಬಂದಿ ನೇಮಕಾತಿ, ಶಿಕ್ಷಕೇತರ ಸಿಬ್ಬಂದಿಯ ಆಂತರಿಕ ವರ್ಗಾವಣೆಗೆ ಸಂಬಂಧಿಸಿದಂತೆ ಒತ್ತಡ ಹೇರ ಲಾಗುತ್ತಿದೆ. ವಿಶ್ವವಿದ್ಯಾಲಯಕ್ಕೆ ಸಂಬಂಧಪಡದ ವ್ಯಕ್ತಿಗಳು ಬಂದು ದೈನಂದಿನ ಆಡಳಿ ತಾತ್ಮಕ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಇದರಿಂದ ನನಗೆ ಸಮರ್ಪಕವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಒಟ್ಟಾರೆ ಬೆಳವಣಿಗೆ ಗಳಿಂದ ನನಗೆ ಜೀವ ಭಯವಿದೆ. ತುರ್ತಾಗಿ ರಕ್ಷಣೆ ನೀಡಬೇಕು’ ಎಂದು ಅವರು ಕೋರಿದ್ದಾರೆ.

ಆದರೆ, ಯಾವುದೇ ವ್ಯಕ್ತಿಯ ವಿರುದ್ಧ ಕುಲಸಚಿವರು ನಿರ್ದಿಷ್ಟ ಆರೋಪ ಮಾಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.