ಬೆಂಗಳೂರು: ಕೃಷಿಯೇತರ ಉದ್ದೇಶಕ್ಕೆ ಪರಿವರ್ತನೆಗೊಂಡು ಅಭಿವೃದ್ಧಿಯಾಗದೇ ಇರುವ ಜಮೀನುಗಳ ನೋಂದಣಿ ಪ್ರಕ್ರಿಯೆಗೆ ಇದ್ದ ತೊಡಕುಗಳನ್ನು ಕಂದಾಯ ಇಲಾಖೆ ನಿವಾರಿಸಿದ್ದು, ಅಂತಹ ಜಮೀನುಗಳನ್ನು ‘ಕೃಷಿಯೇತರ ಅಭಿವೃದ್ಧಿಯಾಗದ ಜಮೀನು’ ಎಂದು ಪರಿಗಣಿಸಲು ಸೂಚಿಸಿದೆ.

ಕಾವೇರಿ–2 ತಂತ್ರಾಂಶ ಹಾಗೂ ಇ-ಖಾತೆ ಸಂಯೋಜನೆಗೊಂಡ ನಂತರ ಕೃಷಿಯೇತರ ಉದ್ದೇಶಕ್ಕೆ ಪರಿವರ್ತನೆಯಾಗಿದ್ದರೂ, ನಿವೇಶನ ಇತ್ಯಾದಿ ಆಸ್ತಿ ಸಂಖ್ಯೆ ಪಡೆಯದೆ (ಇ–ಖಾತಾ) ಜಮೀನಿನ ಸ್ವರೂಪದಲ್ಲೇ ಉಳಿದಿದ್ದ ಭೂಮಿಯನ್ನು ಪಹಣಿ ಅಥವಾ ಇ-ಖಾತಾ ಆಧಾರದ ಮೇಲೆ ನೋಂದಣಿ ಮಾಡಲು ಸಾಧ್ಯವಾಗದೇ, ಯಾವುದೇ ವಹಿವಾಟು ಮಾಡಲು ಆಗದೇ ಸಾರ್ವಜನಿಕರು ಪರದಾಡುವಂತಾಗಿತ್ತು. ಅಂತಹ ಜಮೀನುಗಳನ್ನು ಇನ್ನು ಮುಂದೆ ‘ಕೃಷಿಯೇತರ ಅಭಿವೃದ್ಧಿಯಾಗದ ಜಮೀನು’ ಎಂದು ಪರಿಗಣಿಸಿ, ಪ್ರಸ್ತುತ ಮಾರುಕಟ್ಟೆ ಮೌಲ್ಯದ ಆಧಾರದಲ್ಲಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪಾವತಿಸಿಕೊಂಡು, ನೋಂದಣಿ ಮಾಡಿಕೊಡಲು ಅವಕಾಶ ಕಲ್ಪಿಸಲಾಗಿದೆ.

ಹೊಸ ನಿಯಮದಿಂದಾಗಿ ಪರಿವರ್ತಿತ ಹಾಗೂ ಅಭಿವೃದ್ಧಿಗೊಳ್ಳದ ಭೂಮಿಯನ್ನು ಆರ್ಟಿಸಿ ಆಧಾರದಲ್ಲಿ ಹಾಗೂ ಯೋಜನಾ ಪ್ರಾಧಿಕಾರಗಳಿಂದ ಅನುಮೋದನೆಗೊಂಡಿದ್ದ ಬಡಾವಣೆಗಳಲ್ಲಿನ ರಸ್ತೆ, ಉದ್ಯಾನ ಹಾಗೂ ಆಟದ ಮೈದಾನಗಳಿಗೂ ಇ-ಖಾತಾ ಮಾಡಿಕೊಳ್ಳುವ ಪೂರ್ವದಲ್ಲಿ ಇದ್ದ ನೋಂದಣಿ ಗೊಂದಲಗಳಿಗೂ ತೆರೆ ಎಳೆಯಲಾಗಿದೆ. ಕಂದಾಯ ಇಲಾಖೆ, ಗ್ರಾಮೀಣ ಅಭಿವೃದ್ಧಿ ಇಲಾಖೆ, ನಗರಾಭಿವೃದ್ಧಿ ಹಾಗೂ ಪೌರಾಡಳಿತ ಇಲಾಖೆ ಒಟ್ಟಾಗಿ ಕೆಲವು ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳುವ ಮೂಲಕ ನಗರಗಳ ಇ-ಖಾತಾ ಹಾಗೂ ನೋಂದಣಿಯ ಸಮಸ್ಯೆಗಳಿಗೂ ಪರಿಹಾರ ದೊರೆತಿದೆ ಎಂದು ಕಂದಾಯ ಇಲಾಖೆ ಹೇಳಿದೆ.

ಭೂಮಿ, ಇ-ಸ್ವತ್ತು ಹಾಗೂ ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯು ಅಭಿವೃದ್ಧಿ ಹಂತದಲ್ಲಿದ್ದು, ಒಂದು ಸರ್ವೆ ನಂಬರ್ ಜಮೀನು ಭೂಪರಿವರ್ತನೆಯಾದ ನಂತರ ಇ-ಸ್ವತ್ತು ಹಾಗೂ ಇ-ಆಸ್ತಿ ಗುರುತಿನ ಸಂಖ್ಯೆ ಸೃಜನೆಯಾಗಿದ್ದರೆ ಅಂತಹ ಆಸ್ತಿ ಗುರುತಿನ ಸಂಖ್ಯೆಯನ್ನು ಭೂಮಿ ತಂತ್ರಾಂಶಕ್ಕೆ ರವಾನಿಸಲಾಗುತ್ತದೆ. ಆಗ ಪಹಣಿ ಆಧಾರದ ಮೇಲೆ ನೋಂದಣಿ ವಹಿವಾಟು ನಡೆಸಲು ಅವಕಾಶ ಸಿಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.