ಬೆಂಗಳೂರು: ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಪ್ರತಿ ವರ್ಷ ಮಾರ್ಚ್ 16 ರಂದು ರಾಜ್ಯದಾದ್ಯಂತ ಸರ್ಕಾರದ ವತಿಯಿಂದ ಆಚರಿಸಲು ನಿರ್ಧಾರ ಕೈಗೊಳ್ಳಲಾಗಿದ್ದು, ಈ ಸಂಬಂಧ ಸರ್ಕಾರಿ ಆದೇಶ ಹೊರಡಿಸಲಾಗಿದೆ.

ರೇಣುಚಾಚಾರ್ಯರು ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ನೀಡಿದ್ದಾರೆ. ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆಯ ಬದುಕನ್ನು ಬೋಧಿಸಿದ್ದಾರೆ. ದಕ್ಷಿಣ ಭಾರತದಾದ್ಯಂತ ಲಕ್ಷಾಂತರ ಭಕ್ತ ಸಮೂಹವನ್ನು ರೇಣುಕಾಚಾರ್ಯರು ಹೊಂದಿದ್ದಾರೆ. ಇವರ ಜಯಂತಿ ಆಚರಿಸುವಂತೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.