ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ ಶ್ರೀನಿವಾಸ್, ‘ನನಗೆ ಮನೆ ಊಟ ಪಡೆಯಲು ಅನುಮತಿಸುವಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮೇಲ್ವಿಚಾರಕರಿಗೆ ನಿರ್ದೇಶಿಸಬೇಕು’ ಎಂಬ ಅರ್ಜಿ ವಿಚಾರಣೆ ನಾಳೆ (ಜುಲೈ 19) ನಡೆಯಲಿದೆ.

ಈ ಸಂಬಂಧ ದರ್ಶನ್ (47) ಸಲ್ಲಿಸಿರುವ ರಿಟ್ ಅರ್ಜಿಯು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ಗುರುವಾರ ವಿಚಾರಣೆಗೆ ನಿಗದಿಯಾಗಿತ್ತು.

ಪ್ರಕರಣದ ಸಂಖ್ಯೆ ಕೂಗಿದಾಗ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿ.ಜಿ. ಭಾನುಪ್ರಕಾಶ್ ಅವರು ದರ್ಶನ್ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಪೀಠಕ್ಕೆ ಲಿಖಿತ ಆಕ್ಷೇಪಣೆ ಸಲ್ಲಿಸಿದರು.

ಆಕ್ಷೇಪಣೆ ಸ್ವೀಕರಿಸಿದ ನ್ಯಾಯಪೀಠ ಶುಕ್ರವಾರ (ಜುಲೈ 19) ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿತು. ದರ್ಶನ್ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಹಾಜರಿದ್ದರು.

ಮನವಿ ಏನು?: ‘ಜೈಲಿನಲ್ಲಿ ನೀಡಲಾಗುತ್ತಿರುವ ಆಹಾರ ಜೀರ್ಣಿಸಿಕೊಳ್ಳಲು ನನಗೆ ಆಗುತ್ತಿಲ್ಲ. ಜೈಲಿನ ಊಟದಿಂದಾಗಿ ಅತಿಸಾರ ಉಂಟಾಗಿದ್ದು ಪದೇ ಪದೇ ಭೇದಿ ಆಗುತ್ತಿದೆ. ಪರಿಣಾಮ ದೇಹದ ತೂಕ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಆಹಾರ ತರಿಸಿಕೊಳ್ಳಲು ಜೈಲು ಅಧಿಕಾರಿಗಳಿಗೆ ಮೌಖಿಕವಾಗಿ ಮನವಿ ಮಾಡಿದ್ದೆ. ಆದರೆ, ಅವರು ಇದಕ್ಕೆ ಒಪ್ಪಿಲ್ಲ’ ಎಂದು ದರ್ಶನ್ ಅರ್ಜಿಯಲ್ಲಿ ವಿವರಿಸಿದ್ದಾರೆ.

ಪ್ರಕರಣದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಾರಾಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪರಪ್ಪನ ಅಗ್ರಹಾರ ಕೇಮದ್ರ ಕಾರಾಗೃಹದ ಸೂಪರಿಂಟೆಂಡೆಂಟ್, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ 12 ದಿನಗಳ ಪೊಲೀಸ್ ಕಸ್ಟಡಿಯಲ್ಲಿದ್ದರು. ತದನಂತರ 2024ರ ಜೂನ್ 22ರಿಂದ ನ್ಯಾಯಾಂಗ ಬಂಧನದಲ್ಲಿದ್ದು, ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾ ಕೈದಿಯಾಗಿದ್ದಾರೆ. ದರ್ಶನ್ ವಿರುದ್ಧ ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 302, 120ಬಿ, 201, 364, 355, 384, 143, 147, 148 ಮತ್ತು 149 ಅಡಿ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.