ಬೆಂಗಳೂರು: ‘ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ದೋಷಾರೋಪಣ ಪಟ್ಟಿ ಮತ್ತು ಅದಕ್ಕೆ ಪೂರಕವಾದ ಇತರೆ ಯಾವುದೇ ಅಂಶಗಳನ್ನು ಪ್ರಸಾರ ಮಾಡದಂತೆ ಎಲ್ಲ ವಿಧವಾದ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಲು ನಿರ್ದೇಶಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ನಿರ್ದಿಷ್ಟ ಮಾಧ್ಯಮ ಸಂಸ್ಥೆಗಳನ್ನು ಹೆಸರಿಸುವಂತೆ ನಟ ದರ್ಶನ್ ಅವರಿಗೆ ಹೈಕೋರ್ಟ್ ಸೂಚಿಸಿದೆ.

ಈ ಸಂಬಂಧ ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ ನಟ ದರ್ಶನ್ ತೂಗುದೀಪ ಶ್ರೀನಿವಾಸ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ದರ್ಶನ್ ಪರ ಹಾಜರಾಗಿದ್ದ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ, ‘ಸುದ್ದಿ ಮಾಧ್ಯಮಗಳು, ಅದರಲ್ಲೂ ಎಲೆಕ್ಟ್ರಾನಿಕ್ ಮಾಧ್ಯಮಗಳು ದಿನದ 8 ಗಂಟೆಗಳ ಕಾಲ ನಿರಂತರವಾಗಿ ರೇಣುಕಸ್ವಾಮಿ ಕೊಲೆ ಪ್ರಕರಣದ ಸುದ್ದಿಯನ್ನು ಪೂರ್ವಗ್ರಹ ಪೀಡಿತ ಭಾವನೆಯಿಂದ ಪ್ರಸಾರ ಮಾಡುತ್ತಿವೆ’ ಎಂದು ತೀವ್ರವಾಗಿ ಆಕ್ಷೇಪಿಸಿದರು.

‘ಈ ರೀತಿಯ ಪ್ರಸಾರ ಅಥವಾ ಮುದ್ರಣ ಮಾಧ್ಯಮಗಳಲ್ಲಿನ ವರದಿ ಪ್ರಕಟವಾಗುವಿಕೆಯು, ಕೇಬಲ್ ಟೆಲಿವಿಷನ್ ನೆಟ್‌ವರ್ಕ್ಸ್ ನಿಯಂತ್ರಣ ಕಾಯ್ದೆ–1995ರ ಮತ್ತು ದರ್ಶನ್ ಅವರ ಮೂಲಭೂತ ಹಕ್ಕಿನ ಸ್ಪಷ್ಟ ಉಲ್ಲಂಘನೆಯೂ ಆಗಿದೆ. ಆದ್ದರಿಂದ, ಮಾಧ್ಯಮಗಳನ್ನು ಈ ವಿಷಯದಲ್ಲಿ ನಿಯಂತ್ರಿಸಲು ನಿರ್ದೇಶನ ನೀಡಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಈ ಮನವಿಯನ್ನು ನ್ಯಾಯಪೀಠ ಮಾನ್ಯ ಮಾಡಿ ಪೂರಕ ಆದೇಶ ಬರೆಸಲು ಮುಂದಾಗುತ್ತಿದ್ದಂತೆಯೇ, ಪ್ರತಿವಾದಿಯೂ ಆದ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಅರವಿಂದ ಕಾಮತ್ ಅವರು ಅರ್ಜಿದಾರರ ಮನವಿಯನ್ನು ಬಲವಾಗಿ ವಿರೋಧಿಸಿದರು.
.ರೇಣುಕಸ್ವಾಮಿ ಕೊಲೆ ಪ್ರಕರಣ: ಜಾಮೀನಿಗೆ ಅರ್ಜಿ ಸಲ್ಲಿಸಲು ದರ್ಶನ್ ಸಿದ್ಧತೆ .
‘ಭಾರತದಲ್ಲಿ ಕನಿಷ್ಠ 2 ಸಾವಿರ ಮೀಡಿಯಾ ಹೌಸ್‌ಗಳಿವೆ. ಇವುಗಳಲ್ಲಿ ನಾವು ಯಾರನ್ನು ನಿಯಂತ್ರಿಸಬೇಕು. ಅಷ್ಟಕ್ಕೂ, ಇದು ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ್ದು. ಅರ್ಜಿದಾರರು ಹೀಗೆ ಯಾದೃಚ್ಛಿಕವಾಗಿ ಆದೇಶ ಪಡೆಯಲು ಆಗದು. ಒಂದು ವೇಳೆ ಅವರು ನಿರ್ದಿಷ್ಟ ಮಾಧ್ಯಮ ಅಥವಾ ಚಾನೆಲ್ ವಿರುದ್ಧ ನಮಗೆ ದೂರು ನೀಡಿದರೆ ಸಚಿವಾಲಯ ಖಂಡಿತಾ ಸೂಕ್ತ ಕ್ರಮ ಕೈಗೊಳ್ಳಲು ತಯಾರಿದೆ’ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಸ್ವಯಂ ಪ್ರೇರಿತವಾಗಿ ನೀವು ಯಾಕೆ ಕ್ರಮ ಕೈಗೊಳ್ಳಬಾರದು’ ಎಂದು ಕಾಮತ್ ಅವರನ್ನು ಪ್ರಶ್ನಿಸಿದರು. ಇದಕ್ಕೆ ಅರವಿಂದ ಕಾಮತ್, ‘ಆ ರೀತಿ ಅನಿರ್ದಿಷ್ಟ ವಿಧಾನದಲ್ಲಿ ಕ್ರಮ ಕೈಗೊಳ್ಳಲು ಆಗದು. ಬೇಕಿದ್ದರೆ, ಅರ್ಜಿದಾರರು ನಿರ್ದಿಷ್ಟ ಮಾಧ್ಯಮ ಸಂಸ್ಥೆಗಳನ್ನು ಹೆಸರಿಸಿ ಅವುಗಳ ವಿರುದ್ಧ ದೂರು ನೀಡಿದರೆ ಅಂಥವರ ವಿರುದ್ಧ ಸಚಿವಾಲಯ ತಕ್ಕ ಕಾನೂನು ಕ್ರಮ ಕೈಗೊಳ್ಳುತ್ತದೆ’ ಎಂದು ಪುನರುಚ್ಚರಿಸಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿದಾರರ ಪರ ವಕೀಲರಿಗೆ, ‘ಆಕ್ಷೇಪಣೆ ಇರುವ ನಿರ್ದಿಷ್ಟ ಮಾಧ್ಯಮಗಳ ಕುರಿತು ಮಂಗಳವಾರ (ಸೆ.10) ಬೆಳಗ್ಗೆ 10.30ಕ್ಕೆ ಮೆಮೊ ಸಲ್ಲಿಸಿ’ ಎಂದು ನಿರ್ದೇಶಿಸಿದರು. ಅಂತೆಯೇ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದರು.
.ರೇಣುಕಸ್ವಾಮಿ ಕೊಲೆ ಪ್ರಕರಣ: ದೋಷಾರೋಪ ಪಟ್ಟಿ ಇದೆ 4,500 ಪುಟ! ದರ್ಶನ್ A1?.
ಅರ್ಜಿಯಲ್ಲಿ ಏನಿದೆ?:

‘ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಸಂಖ್ಯೆ 250/2024ರ ಪ್ರಕರಣದ ಕುರಿತಂತೆ ನಗರದ 29ನೇ ಎಸಿಎಂಎಂ ನ್ಯಾಯಾಲಯದಲ್ಲಿ ಸಲ್ಲಿಸಲಾಗಿರುವ ದೋಷಾರೋಪಣ ಪಟ್ಟಿ ಮತ್ತು ಇದಕ್ಕೆ ಪೂರಕವಾದ ಇತರೆ ಅಂಶಗಳನ್ನು ಮಾಧ್ಯಮ ಸಂಸ್ಥೆಗಳು; ಟಿ.ವಿ. ಚಾನೆಲ್ ಮತ್ತು ಮುದ್ರಣ ಮಾಧ್ಯಮಗಳು ದೃಶ್ಯ ಅಥವಾ ಶ್ರವ್ಯ ರೂಪದಲ್ಲಿ ಅಥವಾ ಪ್ರಕಾಶಿಸುವುದಾಲೀ, ಮುದ್ರಿಸುವುದಾಗಲೀ ಇಲ್ಲವೇ ಪ್ರಸಾರ ಮಾಡುವುದಾಗಲೀ ಸಲ್ಲದು. ಇದನ್ನು ನಿರ್ಬಂಧಿಸಲು ಪ್ರತಿವಾದಿಯಾದ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿಯಲ್ಲಿ ರಾಜ್ಯ ಡಿಜಿ–ಐಜಿಪಿ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.
.ರೇಣುಕಸ್ವಾಮಿ ಕೊಲೆ ಪ್ರಕರಣ: ಅಶ್ಲೀಲ ಸಂದೇಶಗಳ ಸ್ಕ್ರೀನ್ ಶಾಟ್, ಆಡಿಯೊ ಪತ್ತೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.