ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ವ್ಯಾಪ್ತಿಯಲ್ಲಿ ಬರುವ ಶಾಲೆ–ಕಾಲೇಜುಗಳಲ್ಲಿ ಆಚರಿಸಬೇಕಾದ ರಾಷ್ಟ್ರೀಯ ಹಬ್ಬ, ನಾಡ ಹಬ್ಬ ಮತ್ತು ಜಯಂತಿಗಳಿಗೆ ಸಂಬಂಧಿಸಿದಂತೆ ಕಾರ್ಯನಿರ್ವಾಹಕ ನಿರ್ದೇಶಕರು ಹೊಸ ಸುತ್ತೋಲೆಯನ್ನು ಗುರುವಾರ ಹೊರಡಿಸಿದ್ದಾರೆ.

ಈ ಸುತ್ತೋಲೆಯ ಪ್ರಕಾರ ಇನ್ನು ಮುಂದೆ ಯುಗಾದಿ, ರಂಜಾನ್, ಕ್ರಿಸ್‌ಮಸ್, ಈದ್ ಮಿಲಾದ್, ಸಂಕ್ರಾಂತಿ ಮತ್ತಿತರ ಹಬ್ಬಗಳ ಆಚರಣೆಗೆ ಅವಕಾಶ ಇಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ ಅವರು ಫೆ. 1ರಂದು ನೀಡಿರುವ ಟಿಪ್ಪಣಿಯಂತೆ, ‘ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಮಹಾತ್ಮಗಾಂಧಿ ಜಯಂತಿ, ಕನ್ನಡ ರಾಜ್ಯೋತ್ಸವ, ಅಂಬೇಡ್ಕರ್ ಜಯಂತಿ, ವಾಲ್ಮೀಕಿ ಜಯಂತಿ, ಕನಕದಾಸ ಜಯಂತಿ, ಬಸವ ಜಯಂತಿ, ಸಂವಿಧಾನ ದಿನಾಚರಣೆ ಮತ್ತು ಯೋಗ ದಿನಾಚರಣೆ ಹೊರತುಪಡಿಸಿ ಇತರ ಧಾರ್ಮಿಕ ಹಬ್ಬಗಳನ್ನು ಆಚರಿಸಿದರೆ ಸಂಬಂಧಪಟ್ಟ ಸಂಸ್ಥೆಯ ಪ್ರಾಂಶುಪಾಲರು ಮತ್ತು ಶಿಕ್ಷಕರ ವಿರುದ್ಧ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದು’ ಎಂದೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.