ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬಾರ್, ಹೋಟೆಲ್, ಕ್ಲಬ್, ಸ್ಟಾರ್ ಹೋಟೆಲ್‌ಗಳು ಮತ್ತು ಬೋರ್ಡಿಂಗ್ ಹೌಸ್‌ಗಳಲ್ಲಿ ಮಧ್ಯರಾತ್ರಿ 1 ಗಂಟೆವರೆಗೆ ವಹಿವಾಟು ನಡೆಸಲು ಸರ್ಕಾರ ಅವಕಾಶ ನೀಡಿದೆ.

ಇದರಿಂದಾಗಿ ಮಧ್ಯರಾತ್ರಿ 1 ರವರೆಗೆ ಮದ್ಯ ಪೂರೈಕೆಗೆ ಅವಕಾಶ ಸಿಗಲಿದೆ.

2024–25 ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ ಈ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ನಿರ್ಬಂಧವನ್ನು ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಆದೇಶ ತಿಳಿಸಿದೆ.

ಸಿಎಲ್–4(ಕ್ಲಬ್), ಸಿಎಲ್–6(ಎ)(ಸ್ಟಾರ್ ಹೋಟೆಲ್),ಸಿಎಲ್–7(ಹೋಟೆಲ್ ಮತ್ತು ಬೋರ್ಡಿಂಗ್ ಹೌಸ್), ಸಿಎಲ್–7ಡಿ (ಎಸ್‌ಸಿ ಎಸ್ಟಿ ವರ್ಗದವರು ನಡೆಸುವ ಹೋಟೆಲ್ ಮತ್ತು ಬೋರ್ಡಿಂಗ್ ಹೌಸ್) ಮತ್ತು ಸಿಎಲ್ –9(ಬಾರ್)ಗಳು ಬೆಳಿಗ್ಗೆ 9 ರಿಂದ ರಾತ್ರಿ 1 ಗಂಟೆಯವರೆಗೆ ಕಾರ್ಯನಿರ್ವಹಿಸಬಹುದು. ಕಾರ್ಮಿಕ ಇಲಾಖೆ 2021 ರ ಜನವರಿ 2 ರಲ್ಲಿ ಹೊರಡಿಸಿದ ಅಧಿಸೂಚನೆಯ ಪ್ರಕಾರ ಹತ್ತು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯ ನೌಕರರನ್ನು ಹೊಂದಿದ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ತೆರೆದಿರಲು ಅವಕಾಶ ಕಲ್ಪಿಸಲಾಗಿದೆ ಎಂದು ಆದೇಶ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.