ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ಮರಣ ಮತ್ತು ನಿವೃತ್ತಿ ಉಪದಾನ (ಡಿಸಿಆರ್ಜಿ) ಸೌಲಭ್ಯವನ್ನು 2006 ಏಪ್ರಿಲ್ 1ರಿಂದಲೇ ಅನ್ವಯವಾಗುವಂತೆ ಜಾರಿಗೊಳಿಸಿ ರಾಜ್ಯ ಸರ್ಕಾರ ಬುಧವಾರ ಆದೇಶವನ್ನು ಹೊರಡಿಸಿದೆ.

2018ರ ಜೂನ್ 23ರಂದು ಹೊರಡಿದ್ದ ಆದೇಶದಲ್ಲಿ 2018ರ ಏಪ್ರಿಲ್ 1ರಿಂದ ಜಾರಿಗೊಳಿಸಿ ಆದೇಶ ಹೊರಡಿಸಲಾಗಿತ್ತು. ಆ ಆದೇಶವನ್ನು ಪರಿಷ್ಕರಿಸಲಾಗಿದೆ. ಇದೀಗ 2006ರಿಂದಲೇ ವಿಸ್ತರಿಸಿರುವ ಸೌಲಭ್ಯವನ್ನು ಇತ್ಯರ್ಥಪಡಿಸಲು ಪ್ರತ್ಯೇಕ ಮಾರ್ಗಸೂಚಿಯನ್ನೂ ಹೊರಡಿಸಲಾಗಿದೆ.

‘ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ನಿರಂತರ ಹೋರಾಟದ ಫಲವಾಗಿ ಸರ್ಕಾರ ಈ ಆದೇಶ ಹೊರಡಿಸಿದೆ. ಆದರೆ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ.

ಡಿಸೆಂಬರ್ 19ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಡು ಇಲ್ಲವೆ ಮಡಿ ಅನಿರ್ದಿಷ್ಟವಾಧಿ ಹೋರಾಟ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ಶಾಂತರಾಮ ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.