ದೊಡ್ಡಬಳ್ಳಾಪುರ: ಹಿರಿಯ ನಾಯಕ ಮತ್ತುಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗೊಳೊಂದಿಗೆ ನಗರದ ಆರ್‌ಎಲ್‌ಜೆ ಐಟಿ ಕ್ಯಾಂಪಸ್‌ನಲ್ಲಿಈಡಿಗ ಸಮುದಾಯದ ಸಂಪ್ರದಾಯದಂತೆಶನಿವಾರ ನಡೆಯಿತು.

ಜಾಲಪ್ಪ ಅವರ ಹಿರಿಯ ಮಗ ಜೆ.ನರಸಿಂಹಸ್ವಾಮಿ ಸಂಜೆ 5ಕ್ಕೆ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಕಿರಿಯ ಮಗ ಜೆ.ರಾಜೇಂದ್ರ ಅವರಿಗೆರಾಷ್ಟ್ರಧ್ವಜ ಹಸ್ತಾಂತರಿಸಲಾಯಿತು.

ಸರ್ಕಾರದ ಪರವಾಗಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಭಾಗವಹಿಸಿದ್ದರು.ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ಮಾಜಿ ಮುಖ್ಯಮಂತ್ರಿ ಹಾಗೂ ಜಾಲಪ್ಪ ಅವರ ಒಡನಾಡಿ ಎಸ್.ಎಂ.ಕೃಷ್ಣ, ಜಾಲಪ್ಪ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳು, ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರುಅಂತ್ಯಕ್ರಿಯೆ ಸಂದರ್ಭದಲ್ಲಿ ಹಾಜರಿದ್ದರು.

ಕೋಲಾರದ ಆಸ್ಪತ್ರೆಯಿಂದ ಶುಕ್ರವಾರ ರಾತ್ರಿಸ್ವಗ್ರಾಮ ತೂಬಗೆರೆಯ ಜಾಲಪ್ಪ ಅವರ ನಿವಾಸಕ್ಕೆ ಪಾರ್ಥಿವ ಶರೀರ ತರಲಾಗಿತ್ತು. ಬೆಳಿಗ್ಗೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ನಗರದ ಪ್ರಮುಖ ಬೀದಿಗಳಲ್ಲಿ ಅಂತಿಮಯಾತ್ರೆ ನಡೆಯಿತು. ಆರ್‌ಎಲ್‌ಜೆಐಟಿ ಕಾಲೇಜಿನ ಜಾಲಪ್ಪ ಕಲಾಮಂದಿರದಲ್ಲಿ ಜನರು ಅಂತಿಮ ನಮನ ಸಲ್ಲಿಸಿದರು.

ಗಣ್ಯರ ಅಂತಿಮ ನಮನ: ಸಂಸದ ಬಿ.ಎನ್.ಬಚ್ಚೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ ನಾಗರಾಜ್, ಶಾಸಕರಾದ ಟಿ.ವೆಂಕಟರಮಣಯ್ಯ, ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಪಿ.ಜಿ.ಆರ್.ಸಿಂಧ್ಯಾ, ಡಾ.ಎಚ್‌ಸಿ.ಮಹಾದೇವಪ್ಪ, ಮಾಜಿ ಶಾಸಕ ಆರ್.ಜಿ. ವೆಂಕಟಾಚಲಯ್ಯ, ಅಂಜನಮೂರ್ತಿ ಸೇರಿದಂತೆ ಹಲವಾರು ಗಣ್ಯರು ಗೌರವ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.