ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಗೆ ಮಂಗಳವಾರ ಹಾಜರಾದ ಐಪಿಎಸ್ ಅಧಿಕಾರಿ ಡಿ. ರೂಪಾ ಅವರಿಗೆ ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

‘ಡಿ. ರೂಪಾ ಅವರು ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟಾಗಿದೆ. ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕವಾಗಿ ನೋವುಂಟು ಮಾಡಿದೆ’ ಎಂದು ರೋಹಿಣಿ ಸಿಂಧೂರಿ ಖಾಸಗಿ ಮೊಕದ್ದಮೆ ಹೂಡಿದ್ದರು.

ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ಡಿ. ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲು ಆದೇಶಿಸಿತ್ತು. ಜೊತೆಗೆ, ಡಿ. ರೂಪಾ ಅವರಿಗೆ ಸಮನ್ಸ್ ಜಾರಿ ಮಾಡಿತ್ತು.

ಸಮನ್ಸ್ ಸ್ವೀಕರಿಸಿದ್ದ ಡಿ. ರೂಪಾ ಅವರು 24ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮಂಗಳವಾರ ಹಾಜರಾದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ₹ 25 ಸಾವಿರ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇತರೆ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.