ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ನಡೆಸಿದ್ದ ದಾಳಿ ಶುಕ್ರವಾರ ಬೆಳಗಿನ ಜಾವ ಮುಕ್ತಾಯಗೊಂಡಿದೆ.

ದೀರ್ಘ ಕಾಲದವರೆಗೆಹುಡುಕಾಟ, ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಬೆಳಗಿನ ಜಾವ ವಾಪಸ್ ಹೋಗಿದ್ದಾರೆ.

ದಾಳಿ ಬಗ್ಗೆ ಪ್ರತಿಕ್ರಿಯಿಸಿದ ರೋಷನ್ ಬೇಗ್, ‘ಅಕ್ರಮ ಹಣಕಾಸು ವ್ಯವಹಾರ(ಮನಿ ಲಾಂಡ್ರಿಂಗ್) ನಡೆದಿದೆಯೇ ಎಂಬುದರ ಬಗ್ಗೆ ಇ.ಡಿ ಅಧಿಕಾರಿಗಳು ಶೋಧ ನಡೆಸಿದರು. ಎರಡು–ಮೂರು ಗಂಟೆಗಳಲ್ಲೇ ನಡೆಯಬೇಕಿದ್ದ ಶೋಧವನ್ನು ಅನಗತ್ಯವಾಗಿ ವಿಳಂಬ ಮಾಡಿದರು. ಕೇಳಿದ ಪ್ರಶ್ನೆಗಳನ್ನೇ ಪದೇ ಪದೇ ಕೇಳಿ ಕಾಲಹರಣ ಮಾಡಿದರು. 2004ರಿಂದ ಚುನಾವಣಾ ಆಯೋಗಕ್ಕೆ, ಪ್ರತಿವರ್ಷ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಕೆ ಮಾಡಿದ್ದೇವೆ. ಆ ಎಲ್ಲಾ ದಾಖಲೆಗಳನ್ನು ಅವರಿಗೆ ಹಾಜರುಪಡಿಸಿದ್ದೇವೆ. ಯಾವುದೇ ತಪ್ಪಿಲ್ಲ ಎಂಬುದು ಅವರಿಗೆ ಮನವರಿಕೆ ಆಗಿದೆ’ ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.