ಬೆಂಗಳೂರು: ‘ಸಕಲೇಶಪುರ ಅರಣ್ಯ ಭಾಗದಲ್ಲಿ ಕಾಳ್ಗಿಚ್ಚಿನಿಂದ ಮೃತಪಟ್ಟ ಅರಣ್ಯ ರಕ್ಷಕ ಸುಂದರೇಶ್ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ ಘೋಷಿಸಲಾಗಿದೆ. ಸುಂದರೇಶ್ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು’ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಜೆಡಿಎಸ್ನ ಎಚ್.ಕೆ. ಕುಮಾರಸ್ವಾಮಿ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ‘ಅರಣ್ಯ ರಕ್ಷಕರು ಗಸ್ತಿನಲ್ಲಿದ್ದಾಗ ಇದ್ದಕ್ಕಿದ್ದಂತೆ ದೊಡ್ಡ ಬೆಂಕಿ ಕಾಣಿಸಿಕೊಂಡು ಈ ಅವಘಡ ಸಂಭವಿಸಿದೆ. ಬೆಂಕಿಯನ್ನು ದಾಟಿ ಹೋದ ಅರಣ್ಯಾಧಿಕಾರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಬೆಂಕಿಯಿಂದ ತಪ್ಪಿಸಿಕೊಳ್ಳಲು ಓಡಿ ಹೋದ ಅರಣ್ಯ ರಕ್ಷಕರಿಗೆ ಬೆಂಕಿ ತಗುಲಿದೆ. ಸುಂದರೇಶ್ ಮೃತಪಟ್ಟು, ಮತ್ತೊಬ್ಬರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಗೆ ಸರ್ಕಾರ ಎಲ್ಲ ವ್ಯವಸ್ಥೆ ಮಾಡಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.