ಕೆ.ಆರ್.ಪೇಟೆ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಕತ್ತರಘಟ್ಟ ಗ್ರಾಮದ ದಿವಂಗತ ಪುಟ್ಟೇಗೌಡರ ಮಗ, ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ ಕೆ.ಪಿ.ಶಿವಕುಮಾರ್ ಅವರು ಅಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ₹ 50 ಲಕ್ಷ ವೆಚ್ಚದಲ್ಲಿ ಎರಡು ಅಂತಸ್ತಿನ 6 ಕೊಠಡಿ ನಿರ್ಮಿಸಿಕೊಡಲು ಮುಂದಾಗಿದ್ದಾರೆ.

ತಂದೆಯ ಕನಸು ನನಸು ಮಾಡುತ್ತಿರುವ ಅವರು, ತಾಯಿ ಜಯಮ್ಮ ಜೊತೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಜವರೇಗೌಡ, ಬಿಇಒ ಸೀತಾರಾಮು ಅವರೊಂದಿಗೆ ಶುಕ್ರವಾರ ಒಡಂಬಡಿಕೆ ಮಾಡಿಕೊಂಡರು.

ಶಾಲೆಯಲ್ಲಿ 1ನೇ ತರಗತಿಯಿಂದ 7ನೇ ತರಗತಿವರೆಗೆ 60 ವಿದ್ಯಾರ್ಥಿಗಳಿದ್ದಾರೆ. ಎಲ್ಕೆಜಿ, ಯುಕೆಜಿ ತರಗತಿಗಳೂ ನಡೆಯುತ್ತಿವೆ. ಹಲವು ದಿನಗಳಿಂದ ಮಕ್ಕಳಿಗೆ ಕೊಠಡಿ ಕೊರತೆ ಇದೆ. ಈಗಿನ ಕಟ್ಟಡದಲ್ಲಿ ಮೂರು ಕೊಠಡಿಗಳು ಶಿಥಿಲವಾಗಿದ್ದು, ಮಳೆಗಾಲದಲ್ಲಿ ನೀರು ನಿಂತು ಗೋಡೆ ಬಿರುಕು ಬಿಟ್ಟಿವೆ.

ಕಟ್ಟಡಗಳನ್ನು ವೀಕ್ಷಿಸಿದ ಶಿವಕುಮಾರ್, ‘ದುರಸ್ತಿ ಮಾಡಿದರೆ ಪ್ರಯೋಜನವಾಗುವುದಿಲ್ಲ; ಹೊಸದಾಗಿ ಕೊಠಡಿ ನಿರ್ಮಿಸಿಕೊಡುತ್ತೇವೆ’ ಎಂದು ಭರವಸೆ ನೀಡಿದ್ದರು. ಅದು ಈಗ ಸಾಕಾರಗೊಳ್ಳುತ್ತಿದ್ದು ಗ್ರಾಮಸ್ಥರು, ಇಲಾಖೆ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ತಂದೆ ಹುಟ್ಟೂರಿನ ಶಾಲೆಯನ್ನು ಅಭಿವೃದ್ಧಿಪಡಿಸುವ ಕನಸು ಕಂಡಿದ್ದರು. ಅವರ ಕನಸು ನನಸು ಮಾಡುವುದು ನನ್ನ ಜವಾಬ್ದಾರಿ. 6 ಕೊಠಡಿಗಳ ನಿರ್ಮಾಣಕ್ಕೆ ₹ 50 ಲಕ್ಷ ವೆಚ್ಚ ತಗಲುತ್ತದೆ. ಅಷ್ಟೂ ಹಣವನ್ನು ಭರಿಸಲು ಒಪ್ಪಿ ಒಡಂಬಡಿಕೆಗೆ ಸಹಿ ಮಾಡಿದ್ದೇವೆ’ ಎಂದು ಶಿವಕುಮಾರ್ ತಿಳಿಸಿದರು.

‘ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕುಟುಂಬವೊಂದು ₹ 50 ಲಕ್ಷ ನೀಡಿ 6 ಕೊಠಡಿ ನಿರ್ಮಿಸಿಕೊಡುತ್ತಿದೆ. ಸಮಾಜಕ್ಕೆ ಇದು ಸ್ಫೂರ್ತಿಯಾಗಲಿ’ ಎಂದು ಡಿಡಿಪಿಐ ಜವರೇಗೌಡ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.