ಶಿವಮೊಗ್ಗ: ಇಲ್ಲಿನ ಪೇಸ್ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ದಕ್ಷಿಣ ಪ್ರಾಂತ್ಯದ ಆರ್‌ಎಸ್‌ಎಸ್ ಸಂಚಾಲಕರ ಸಭೆ ನಡೆಯಲಿದೆ. ಸಭೆಯಲ್ಲಿ ಸಂಘಟನೆಯ ರಾಷ್ಟ್ರೀಯ ಸರಸಂಚಾಲಕ ಮೋಹನ್ ಭಾಗವತ್ ಪಾಲ್ಗೊಳ್ಳಲಿದ್ದಾರೆ.

ಬಳಿಕ ಅವರು ಇಲ್ಲಿನ ಓ.ಟಿ ರಸ್ತೆಯಲ್ಲಿರುವ ದಿವಂಗತ ದಿನೇಶ್ ಪೈ ಮನೆಗೆ ಭೇಟಿ ನೀಡಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

ದಿನೇಶ್ ಪೈ ಆರ್‌ಎಸ್‌ಎಸ್ ಸಂಘಟನೆಯಲ್ಲಿ ಸಕ್ರಿಯರಾಗಿದ್ದು, ಇತ್ತೀಚೆಗೆ ಹೃದಯಾಘಾತದಿಂದ ನಿಧನರಾಗಿದ್ದರು. ಮೋಹನ್ ಭಾಗವತ್ ಮೂರು ದಿನಗಳ ಕಾಲ ಶಿವಮೊಗ್ಗದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ವಿಧಾನಸಭೆಗೆ ಚುನಾವಣೆ ಹತ್ತಿರ ಇರುವುದರಿಂದ ಮೋಹನ್ ಭಾಗವತ್ ಅವರ ಶಿವಮೊಗ್ಗ ಭೇಟಿ ಮಹತ್ವ ಪಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.