ಬೆಂಗಳೂರು: ‘ಪೌರ ಕಾರ್ಮಿಕರ ಜೊತೆ ಸೌಹಾರ್ದದಿಂದ ನಡೆದುಕೊಳ್ಳಬೇಕು. ಅಗೌರವದಿಂದ ಕಾಣುವುದು ಶಿಕ್ಷಾರ್ಹ ಅಪರಾಧ’ ಎಂದು ಪೌರಾಡಳಿತ ನಿರ್ದೇಶನಾಲಯ ಹೇಳಿದೆ.

ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಪತ್ರವನ್ನು ಉಲ್ಲೇಖಿಸಿ ಪ್ರಕಟಣೆ ಹೊರಡಿಸಿರುವ ಅವರು, ‘ಮಹಾನಗರ ಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸುವುದು, ಜಾತಿ ಹೆಸರಿನಲ್ಲಿ ನಿಂದಿಸುವುದು ಶಿಕ್ಷಾರ್ಹ ಅಪರಾಧ’ ಎಂದಿದ್ದಾರೆ.

‘ಅಸ್ಪೃಶ್ಯತೆಯನ್ನು ನಿಷೇಧಿಸಲಾಗಿದ್ದು, ಯಾವುದೇ ರೂಪದಲ್ಲಿ ಅದರ ಆಚರಣೆ ಅಪರಾಧ. ಸ್ವಚ್ಛತಾ ಕಾರ್ಮಿಕರನ್ನು ಗೌರವಿಸುವುದು ನೈತಿಕ ಬಾಧ್ಯತೆ ಅಷ್ಟೇ ಅಲ್ಲ, ಸಮಾಜದ ಕರ್ತವ್ಯವೂ ಆಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ವೈಯಕ್ತಿಕ ಘನತೆ ಮತ್ತು ಗೌರವಕ್ಕೆ ಅರ್ಹರಾಗಿರುತ್ತಾರೆ. ಹೀಗಾಗಿ, ಯಾವುದೇ ಸ್ಥಳದಲ್ಲಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಸದಸ್ಯರನ್ನು ಜಾತಿ ಹೆಸರಿನಲ್ಲಿ ನಿಂದಿಸುವುದು, ಉದ್ದೇಶಪೂರ್ವಕವಾಗಿ ಅವಮಾನಿಸುವುದು, ಬೆದರಿಸುವುದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧ’ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.