ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ.
— Siddaramaiah (@siddaramaiah) December 8, 2023
ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ… pic.twitter.com/5D9orugWet
ನಮ್ಮ ಕರುನಾಡಿನ ಹೆಸರಾಂತ ಕಲಾವಿದೆ ಲೀಲಾವತಿ ಅಮ್ಮನವರು ಇಂದು ಸಾವನ್ನಪ್ಪಿರುವುದು ಇಡೀ ರಾಜ್ಯಕ್ಕೆ ಒಂದು ದುಃಖಕರ ಸಂಗತಿ. ಈ ಮಹಾನ್ ಚೇತನಕ್ಕೆ ಶಾಂತಿ ದೊರಕಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ 🙏 ವಿನೋದ್ ರಾಜ್ ರವರ ಕುಟುಂಬಕ್ಕೆ ಈ ನೋವನ್ನು ತಡೆದುಕೊಳ್ಳುವ ಶಕ್ತಿ ಸಿಗಲಿ.
— Darshan Thoogudeepa (@dasadarshan) December 8, 2023
ಓಂ ಶಾಂತಿ pic.twitter.com/Eg7xQb1V6p
ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟಿ, ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಮತ್ತು ಅತ್ಯುತ್ತಮ ಪೋಷಕನಟಿ ಪ್ರಶಸ್ತಿಗಳನ್ನು ಪಡೆದಿರುವ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆ ತುಂಬ ನೋವು ತಂದಿದೆ. ಕನ್ನಡ ಚಿತ್ರರಂಗಕ್ಕೆ ಇದು ತುಂಬಲಾಗದ ನಷ್ಟ.
— Pralhad Joshi (@JoshiPralhad) December 8, 2023
ಓಂ ಶಾಂತಿ pic.twitter.com/WusA98Si94
ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ಅತೀವ ದುಃಖ ಉಂಟುಮಾಡಿದೆ. ಇತ್ತೀಚೆಗಷ್ಟೇ ಅವರು ನೆಲಮಂಗಲ ಬಳಿಯ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿದ್ದ ಪಶು ಆಸ್ಪತ್ರೆಯನ್ನು ಉದ್ಘಾಟಿಸಿದ್ದೆ. ಸಂಕಷ್ಟದಲ್ಲಿದ್ದರೂ ಸಮಾಜ ಸೇವೆ ಮಾಡಬೇಕೆನ್ನುವ ಅವರ ಕಳಕಳಿ ನನ್ನ ಹೃದಯ ಮುಟ್ಟಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ… pic.twitter.com/vxiUH5ceKB
— DK Shivakumar (@DKShivakumar) December 8, 2023
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.