ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚಿತ್ರ ನಟಿಯರು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜತೆ ಇರುವ ಚಿತ್ರಗಳನ್ನು ಬಿಜೆಪಿ ಬಿಡುಗಡೆ ಮಾಡಿದೆ.

‘ನಟ– ನಟಿಯರು ಎಲ್ಲ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಕಾಣಿಸಿಕೊಳ್ಳುತ್ತಾರೆ. ಇದನ್ನೇ ಪಕ್ಷದ ಜತೆಗಿನ ಸಂಬಂಧ ಎಂದು ಬಿಂಬಿಸಿ ಆರೋಪಿಸುವುದು ಹಾಸ್ಯಾಸ್ಪದ ಅಲ್ಲವೇ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಡ್ರಗ್ಸ್ ಪ್ರಕರಣ ತನಿಖೆಯ ಹಂತದಲ್ಲಿದ್ದು, ಬಿಜೆಪಿ ಸರ್ಕಾರ ಕಠಿಣ ನಿಲುವು ತೆಗೆದುಕೊಂಡಿದೆ. ಆದರೆ, ಕಾಂಗ್ರೆಸ್ ಪಕ್ಷ ಇಲ್ಲ ಸಲ್ಲದ ಆರೋಪ ಮಾಡಿ ತನಿಖೆಯ ದಿಕ್ಕು ತಪ್ಪಿಸುತ್ತಿದೆ. ಅವರ ನಾಯಕರೂ ಚಿತ್ರ ನಟಿಯರ ಜತೆ ಇರುವ ಚಿತ್ರಗಳಿವೆ ಇದಕ್ಕೆ ಏನು ಹೇಳುತ್ತಾರೆ ಎಂದು ಬಿಜೆಪಿ ಪ್ರಶ್ನಿಸಿದೆ.

ನಟಿ ರಾಗಿಣಿ ಚುನಾವಣೆಯೊಂದರಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದ ಚಿತ್ರ ಬಿಡುಗಡೆ ಮಾಡಿ, ‘ಮಾದಕ ವಸ್ತು ಮಾರಾಟ ಮಾಡುತ್ತಿರುವವರ ವಿರುದ್ಧ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದು ಕಾಂಗ್ರೆಸ್ ಲೇವಡಿ ಮಾಡಿತ್ತು. ಅದಕ್ಕೆ ಬಿಜೆಪಿ ತಿರುಗೇಟು ನೀಡಿದೆ. ರಾಗಿಣಿ ಮತ್ತು ಸಂಜನಾ ಜತೆಗೆ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಇರುವ ಚಿತ್ರಗಳನ್ನು ಟ್ಯಾಗ್ ಮಾಡಿದೆ.

ಕಾಂಗ್ರೆಸ್ ಮಾಡಿದ್ದ ಟ್ವೀಟ್ :

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.