ಬೆಂಗಳೂರು: 2018ನೇ ಸಾಲಿನಲ್ಲಿ ದಲಿತರ ಮೇಲೆ 1,751 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ. ಪ್ರತಿದಿನ 4 ಅಥವಾ 5 ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ. ಪ್ರತಿ ಎರಡು ದಿನಗಳಿಗೆ ಒಬ್ಬ ಪರಿಶಿಷ್ಟ ಮಹಿಳೆ ಮೇಲೆ ಅತ್ಯಾಚಾರ ನಡೆಯುತ್ತಿದೆ.

‘ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆ’ ಅನುಷ್ಠಾನದ 2018ರ ವಾರ್ಷಿಕ ರಾಜ್ಯ ವರದಿಯ ಅಂಕಿ–ಅಂಶಗಳಿವು.

‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲ ವರ್ಧನ ಸಮಿತಿ’ ಹಾಗೂ ‘ಕರ್ನಾಟಕ ದಲಿತ ಮಹಿಳಾ ವೇದಿಕೆ’ ಸಿದ್ಧಪಡಿಸಿರುವ ಈ ವಾರ್ಷಿಕ ವರದಿಯನ್ನು ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಬಿಡುಗಡೆ ಮಾಡಿದರು.

ಈ ಸಾಲಿನಲ್ಲಿ ಒಟ್ಟು 164 ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. 122 ಕೊಲೆ ಹಾಗೂ ಕೊಲೆ ಪ್ರಯತ್ನ ಪ್ರಕರಣಗಳು ದಾಖಲಾಗಿವೆ. ಒಟ್ಟಾರೆ ವರದಿಯಾದ ಪ್ರಕರಣಗಳಲ್ಲಿ ಬೆಂಗಳೂರು ನಗರ ಅತೀ ಹೆಚ್ಚು(163) ಪ್ರಕರಣಗಳು ವರದಿಯಾಗಿವೆ. ಕಳೆದ 7 ವರ್ಷಗಳಿಂದಲೂ ಈ ಜಿಲ್ಲೆ ದಲಿತರ ಮೇಲಿನ ದೌರ್ಜನ್ಯದಲ್ಲಿ ಮೊದಲ ಸ್ಥಾನದಲ್ಲಿದೆ.

ನ್ಯಾಯಾಲಯಗಳಲ್ಲಿ ವಿಲೇವಾರಿ ಯಾದ ಒಟ್ಟು 1,087 ಪ್ರಕರಣಗಳಲ್ಲಿ 46 ಪ್ರಕರಣಗಳಲ್ಲಷ್ಟೇ ಶಿಕ್ಷೆಯಾಗಿದ್ದು, 874 ಪ್ರಕರಣಗಳು ಖುಲಾಸೆಗೊಂಡಿವೆ. ಶಿಕ್ಷೆಯ ಪ್ರಮಾಣ ಶೇ 4.23 ರಷ್ಟಿದೆ.

‘ಬಿ ವರದಿ ಸಲ್ಲಿಕೆಯಿಂದ ಅಂತ್ಯ ಗೊಂಡಿರುವ ಪ್ರಕರಣಗಳ ಪ್ರಮಾಣ ಶೇ 4.10ರಷ್ಟಿದ್ದರೆ. ರಾಜ್ಯದ 10 ಜಿಲ್ಲೆಗಳಲ್ಲಿ ಶಿಕ್ಷೆಯ ಪ್ರಮಾಣ ಶೂನ್ಯವಿದೆ. ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೇ ಇರುವುದು, ಸರ್ಕಾರದ ಸುತ್ತೋಲೆಗಳನ್ನು ಅನುಷ್ಠಾನಕ್ಕೆ ತರಲು ಅಧಿಕಾರಿಗಳು ವಹಿಸಿರುವ ನಿರ್ಲಕ್ಷ್ಯ, ಕಾಲಕಾಲಕ್ಕೆ ಸಭೆಗಳು ನಡೆಯದಿರುವುದೇ ದೌರ್ಜನ್ಯ ಪ್ರಕರಣಗಳು ಹೆಚ್ಚಳವಾಗಲು ಕಾರಣ’ ಎಂದು ಸಮಿತಿಯ ರಾಜ್ಯ ಸಂಚಾಲಕಿ ಪಿ. ಯಶೋಧಾ ಆರೋಪಿಸಿದರು.

ಸಮಿತಿಯ ಹಕ್ಕೊತ್ತಾಯಗಳು

-ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು.

-ರಾಜ್ಯದಲ್ಲಿ ಆಚರಣೆಯಲ್ಲಿರುವ ಅಸ್ಪೃಶ್ಯತೆ ಕುರಿತು ಸಮೀಕ್ಷೆ ನಡೆಸಬೇಕು.

-ಶೂನ್ಯ ಶಿಕ್ಷೆಗೆ ಕಾರಣವಾಗಿರುವ 10 ಸರ್ಕಾರಿ ವಿಶೇಷ ಅಭಿಯೋಜಕರನ್ನು ಬದಲಿಸಬೇಕು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು

-ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಆದ್ಯತೆ ಮೇರೆಗೆ ಪ್ರತ್ಯೇಕ ನ್ಯಾಯಾಲಯ ಸ್ಥಾಪಿಸಬೇಕು

-ಪೊಲೀಸ್ ಠಾಣೆ ಮಟ್ಟದಲ್ಲಿ ಎಸ್ಸಿ-ಎಸ್ಟಿ ದೌರ್ಜನ್ಯಗಳನ್ನು ರಾಜಿ ಮಾಡುತ್ತಿರುವ ಅಧಿಕಾರಿಗಳನ್ನು ವಜಾಗೊಳಿಸಬೇಕು

-ಪೊಲೀಸ್ ಠಾಣೆಗಳಲ್ಲಿ ದಲಿತ ದಿನವನ್ನು ತಪ್ಪದೇ ಆಚರಣೆ ಮಾಡಲು ಕ್ರಮ ಕೈಗೊಳ್ಳಬೇಕು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.