ಬೆಂಗಳೂರು: ‘ಶಾಲೆಗಳ ಮಾನ್ಯತೆ ನವೀಕರಣದಲ್ಲಿ ಹಲವು ಜಿಲ್ಲೆಗಳ ಉಪ ನಿರ್ದೇಶಕರು (ಡಿಡಿಪಿಐ) ಅವ್ಯವಹಾರ ನಡೆಸಿರುವ ಶಂಕೆ ಇದ್ದು, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು’ ಎಂದು ಕರ್ನಾಟಕ ಶಾಲಾ ಕಾಲೇಜು ಪೋಷಕರ ಸಂಘಗಳ ಸಮನ್ವಯ ಸಮಿತಿ ಅಧ್ಯಕ್ಷ ಬಿ.ಎನ್. ಯೋಗಾನಂದ ಒತ್ತಾಯಿಸಿದ್ದಾರೆ.

‘ಕರ್ನಾಟಕದಲ್ಲಿ 5,886 ಖಾಸಗಿ ಶಾಲೆಗಳು ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಿವೆ. ಅವುಗಳಲ್ಲಿ 1,944 ಅರ್ಜಿಗಳನ್ನು ಅನುಮೋದಿಸಿದ್ದು, 131 ಅರ್ಜಿಗಳು ತಿರಸ್ಕೃತಗೊಂಡಿವೆ. 3,811 ಶಾಲೆಗಳ ಮಾನ್ಯತೆ ನವೀಕರಣ ಬಾಕಿ ಇವೆ. ಹಲವು ಶಾಲೆಗಳು ನಿಯಮದಂತೆ ಕಟ್ಟಡ ಪರವಾನಗಿ, ಅಗ್ನಿಸುರಕ್ಷತೆ ಪ್ರಮಾಣಪತ್ರ, ಭೂ ಪರಿವರ್ತನೆ ದಾಖಲೆಗಳನ್ನು ಸಲ್ಲಿಸದೇ ಇದ್ದರೂ, ಹಣ ಪಡೆದು ನವೀಕರಣ ಮಾಡಲಾಗಿದೆ’ ಎಂದು ಆರೋಪಿಸಿದ್ದಾರೆ.

‘ನಿಯಮ ಉಲ್ಲಂಘಿಸಿ ಮಾನ್ಯತೆ ನವೀಕರಣ ಮಾಡಿಕೊಟ್ಟ ಆರೋಪದ ಮೇಲೆ ವಿಜಯಪುರ ಡಿಡಿಪಿಐ ಅವರನ್ನು ಅಮಾನತು ಮಾಡಲಾಗಿದೆ. ಅದೇ ರೀತಿ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿಯಮ ಉಲ್ಲಂಘಿಸಲಾಗಿದೆ. ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.