ಬೆಂಗಳೂರು: ರಾಜ್ಯದ ಎಲ್ಲೆಡೆ ಬುಧವಾರ ಶಾಲೆಗಳು ಪುನರಾರಂಭವಾಗಿದ್ದು, ಒಂದೂವರೆ ತಿಂಗಳ ಬೇಸಿಗೆ ರಜೆಯ ನಂತರ ಶಾಲೆಗೆ ಮರಳಿದ ಮಕ್ಕಳಲ್ಲಿ ಸಹಪಾಠಿಗಳನ್ನು ಮತ್ತೆ ಭೇಟಿ ಮಾಡಿದ ಸಂಭ್ರಮ ಮೇರೆಮೀರಿತ್ತು.

ಮಕ್ಕಳ ಸ್ವಾಗತಕ್ಕಾಗಿ ಬಾಳೆಕಂದು, ತಳಿರು ತೋರಣಗಳಿಂದ ಶಾಲೆಗಳನ್ನು ಸಿಂಗಾರಗೊಳಿಸಲಾಗಿತ್ತು. ಶಾಲೆಗಳಲ್ಲಿ ಹಬ್ಬದ ವಾತಾರಣವಿತ್ತು. ಎರಡು ದಿನಗಳಿಂದ ಶಾಲೆಗೆ ಬರುತ್ತಿರುವ ಶಿಕ್ಷಕ ವೃಂದ ಎಲ್ಲ ಸಿದ್ಧತೆ ಮಾಡಿಕೊಂಡಿತ್ತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು, ಸದಸ್ಯರು ಮಕ್ಕಳಿಗೆ ಸಿಹಿ ತಿನಿಸಿ ಶಾಲೆಗಳಿಗೆ ಬರಮಾಡಿಕೊಂಡರು.

ಈಗಷ್ಟೇ ಸಚಿವ ಸ್ಥಾನ ಅಲಂಕರಿಸಿರುವ ಮಧು ಬಂಗಾರಪ್ಪ ದೇವನಹಳ್ಳಿ ತಾಲ್ಲೂಕಿನ ಅರದೇಶಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಸಿಹಿ ತಿನಿಸುವ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಿದರು. ನಂತರ ಬಸವನಪುರ ಹಾಗೂ ಜಾಲಿಗೆ ಶಾಲೆಗಳಿಗೆ ಭೇಟಿ ನೀಡಿದರು.

ಮೊದಲ ದಿನವೇ ಅಧಿಕ ಸಂಖ್ಯೆಯಲ್ಲಿ ಮಕ್ಕಳು ಉತ್ಸಾಹದಿಂದ ಶಾಲೆಗಳತ್ತ ಹೆಜ್ಜೆ ಹಾಕಿದರು. ಶಿಕ್ಷಕರು, ಕೆಲ ಶಾಲೆಗಳಲ್ಲಿ ಮಕ್ಕಳ ಜತೆ ಪೋಷಕರೂ ಆಗಮಿಸಿದ್ದರು. ಮಧ್ಯಾಹ್ನದ ಬಿಸಿಯೂಟದಲ್ಲೂ ಸಹಿಯ ಸವಿ ದೊರಕಿತು. ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಲಾಯಿತು.

ಮೇ 31ರಿಂದ ಜೂನ್ 30ರವರೆಗೆ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗಳಿಗೆ ಕರೆತರಲು ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.