ಚಿತ್ರದುರ್ಗ: ಎರಡನೇ ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಡಿ.2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ ಆದೇಶಿಸಿದೆ.

ದಾವಣಗೆರೆಯ ವಿರಕ್ತ ಮಠದಲ್ಲಿ ಶರಣರನ್ನು ಬಂಧಿಸಿದ ಗ್ರಾಮಾಂತರ ಠಾಣೆಯ ಪೊಲೀಸರು ನೇರವಾಗಿ ಚಿತ್ರದುರ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದರು. 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಮೊದಲ ಪೋಕ್ಸೊ ಪ್ರಕರಣದಲ್ಲಿ ಜಾಮೀನು ಮೇಲೆ ನ.16ರಂದು ಬಿಡುಗಡೆಯಾಗಿದ್ದ ಶಿವಮೂರ್ತಿ ಶರಣರು ನಾಲ್ಕು ದಿನದಲ್ಲಿ ಮತ್ತೆ ಕಾರಾಗೃಹಕ್ಕೆ ತೆರಳಲಿದ್ದಾರೆ.

ಎರಡನೇ ಪೋಕ್ಸೊ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ನೀಡಿ ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ ಬೆಳಿಗ್ಗೆ ಆದೇಶ ಹೊರಡಿಸಿತ್ತು.

ಶಿವಮೂರ್ತಿ ಶರಣರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರಿಗೆ ಮಂಗಳವಾರದ ವರೆಗೆ ಕಾಲಾವಕಾಶ ನೀಡಿ ನ್ಯಾಯಾಧೀಶೆ ಬಿ.ಕೆ.ಕೋಮಲಾ ಆದೇಶಿಸಿದ್ದರು. ವಾರೆಂಟ್ ಕೈಸೇರಿದ ತಕ್ಷಣ ಪೊಲೀಸರು ದಾವಣಗೆರೆಗೆ ತೆರಳಿ ಬಂಧನ ಪ್ರಕ್ರಿಯೆ ಪೂರ್ಣಗೊಳಿಸಿದರು.
.ಎರಡನೇ ಪೋಕ್ಸೊ ಪ್ರಕರಣ: ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರ ಬಂಧನ.Video | ಮುರುಘಾ ಶ್ರೀ ಮರು ಬಂಧನಕ್ಕೆ ಕಾರಣವಾದ ಅಂಶಗಳೇನು ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.