ಬೆಂಗಳೂರು: ಜಾತ್ಯತೀತ, ವೈಜ್ಞಾನಿಕ ಮನೋಭಾವದ ಶಿಕ್ಷಣದಿಂದ ಮಾತ್ರ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಉಚಿತ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನವೂ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ ಎಂದರು.

ವೈಜ್ಞಾನಿಕವಾಗಿ, ವೈಚಾರಿಕವಾಗಿ ನೀವು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗುತ್ತೀರಿ ಎಂದರು.

ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೆ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು.

ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ, ಯಾಸ್ಮಿನ್ ಪ್ರೆಮ್ ಜಿ, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಹಮದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮೆಹರೂಜ್ ಸೇರಿ, ಶಾಸಕ ರಿಜ್ವಾನ್ ಆರ್ಷದ್, ಅನುರಾಗ ಮೆಹರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.