ರಾಯಚೂರು: ನಗರದಲ್ಲಿ ಆಶ್ರಯ ಪಡೆದಿದ್ದ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಅನಾಥ ಬಾಲಕಿಯ ಮೇಲೆ ಕಾವಲುಗಾರ ಸಿದ್ದಯ್ಯ ಎನ್ನುವ ಯುವಕ ಶಾಲೆಗೆ ಬಿಟ್ಟುಬರುವ ನೆಪದಲ್ಲಿ ಅತ್ಯಾಚಾರ ಎಸಗಿರುವ ಪ್ರಕರಣಎರಡು ತಿಂಗಳ ಬಳಿಕ ಬೆಳಕಿಗೆ ಬಂದಿದೆ.

ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಆರಂಭಿಸಿದ್ದಾರೆ.

ನವೆಂಬರ್‌ನಲ್ಲಿ ಅತ್ಯಾಚಾರ ನಡೆದಿದೆ ಎಂದು ಬಾಲಕಿಯ ಸಹೋದರ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ಸಲ್ಲಿಸಿದ್ದರು. ಆದರೆ, ಅಧಿಕಾರಿಗಳು ತನಿಖೆ ನಡೆಸದೆ ನಿರ್ಲಕ್ಷ್ಯ ವಹಿಸಿದ್ದರು. ಈ ಸಂಬಂಧ ಆಶ್ರಯ ಕೇಂದ್ರದ ಮೇಲ್ವಿಚಾರಕ ಸಯ್ಯದ್ ಪಾಷಾ ಅವರನ್ನು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅಮಾನತುಗೊಳಿಸಿದ್ದಾರೆ. ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗುರುಪ್ರಸಾದ್ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದ್ದಾರೆ.

ಜನವರಿ 30ರಂದು ಮಕ್ಕಳ ರಕ್ಷಣಾ ಘಟಕದಿಂದ ಮಹಿಳಾ ಠಾಣೆಗೆ ದೂರು ಸಲ್ಲಿಕೆಯಾಗಿತ್ತು. ಇದರಿಂದ ಎಚ್ಚೆತ್ತ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಶುಕ್ರವಾರ ವಿದ್ಯಾರ್ಥಿನಿಯಿಂದ ಮಾಹಿತಿ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.