ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭದ್ರತಾ ಲೋಪ: ಸಿಎಂ ಸಿದ್ದರಾಮಯ್ಯಗೆ ಶಾಲು ಹೊದಿಸಲು ವೇದಿಕೆಗೆ ಜಿಗಿದ ಯುವಕ

Published : 15 ಸೆಪ್ಟೆಂಬರ್ 2024, 7:29 IST
Last Updated : 15 ಸೆಪ್ಟೆಂಬರ್ 2024, 7:29 IST
ಫಾಲೋ ಮಾಡಿ
Comments

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮದಲ್ಲಿ ಭದ್ರತಾ ನಿಯಮ ಉಲ್ಲಂಘನೆಯಾಗಿರುವ ಘಟನೆ ನಡೆದಿದೆ.

ವಿಧಾನಸೌಧದ ಮುಂಭಾಗ ನಡೆಯುತ್ತಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಸಿ.ಎಂ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್​.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಗಣ್ಯರು ಆಸೀನರಾಗಿದ್ದರು.

ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಯುವಕನೊಬ್ಬ ಏಕಾಏಕಿ ವೇದಿಕೆ ಮೇಲೆ ಜಿಗಿದು ಸಿದ್ದರಾಮಯ್ಯ ಅವರ ಕಡೆ ಧಾವಿಸಿದ್ದಾನೆ. ಕೂಡಲೇ ಭದ್ರತಾ ಸಿಬ್ಬಂದಿ ಆ ಯುವಕನನ್ನು ವಶಕ್ಕೆ ಪಡೆದಿದ್ದಾರೆ.

ಕನ್ನಡ ಬಾವುಟದ ಶಾಲು ಧರಿಸಿದ್ದ ಯುವಕ, ಸಿದ್ದರಾಮಯ್ಯ ಅವರಿಗೆ ಶಾಲು ಹಾಕಲು ವೇದಿಕೆಯತ್ತ ತೆರಳಿದ್ದ, ಈ ವೇಳೆ ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಶಾಲನ್ನು ಸಿದ್ದರಾಮಯ್ಯ ಅವರ ಕಡೆ ಎಸೆದ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಯುವಕ ಕನಕಪುರ ಮೂಲದವನು ಎನ್ನಲಾಗಿದೆ. ಆತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT