ಕಲಬುರ್ಗಿ: ಸೇಡಂ ತಾಲ್ಲೂಕು ಬೆನಕನಹಳ್ಳಿ ಬಳಿ ಇರುವ ಶ್ರೀ ಸಿಮೆಂಟ್ ಕಾರ್ಖಾನೆ ಆವರಣದಲ್ಲಿ ಗುರುವಾರ ಸಂಜೆ ಕ್ರೇನ್ ಬಿದ್ದು ಆರು ಜನ ಕಾರ್ಮಿಕರು ಮೃತಪಟ್ಟಿದ್ದರಿಂದ ರೊಚ್ಚಿಗೆದ್ದ ಕಾರ್ಮಿಕರು ಶುಕ್ರವಾರ ಕಾರ್ಖಾನೆ ಮೇಲೆ ಕಲ್ಲು ತೂರಿದರು.

ಇದರಿಂದ ಆರು ಜನ ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರ್ಮಿಕರು ಕಾರ್ಖಾನೆಯ ಕಚೇರಿ ಕಿಟಕಿಗಳ ಗಾಜುಗಳನ್ನು ಜಖಂಗೊಳಿಸಿದರು. ಅಲ್ಲದೆ ಸರ್ಕಾರಿ ಬಸ್‌ವೊಂದಕ್ಕೆ ಕಲ್ಲು ಎಸೆದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಪ್ರಯೋಗಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ 30 ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಮೃತರ ಕುಟುಂಬಕ್ಕೆ ತಲಾ ₹20 ಲಕ್ಷ ಪರಿಹಾರ ಕೊಡಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅವರು ಕಾರ್ಖಾನೆ ಆಡಳಿತ ಮಂಡಳಿ ಸದಸ್ಯರ ಜತೆ ಮಾತುಕತೆ ನಡೆಸಿದರು. ಕಾರ್ಖಾನೆಯ ಕೋಡ್ಲಾ ಘಟಕದ ಮುಖ್ಯಸ್ಥ ಅರವಿಂದಕುಮಾರ ಪಾಟೀಲ, ‘ಮೃತರ ಕುಟುಂಬಗಳಿಗೆ ತಲಾ ₹12 ಲಕ್ಷ ಪರಿಹಾರ ನೀಡಲಾಗುವುದು’ ಎಂದು ಲಿಖಿತ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.