ಬೆಂಗಳೂರು:17 ಮಂದಿಅನರ್ಹ ಶಾಸಕರು ಮತ್ತು ಇತರ ಕೆಲವು ವ್ಯಕ್ತಿಗಳವಿರುದ್ದ ದೇಶದ್ರೋಹ ಆರೋಪದಡಿ ಎನ್ಐಎ (ರಾಷ್ಟ್ರೀಯ ತನಿಖಾ ದಳ) ವಿಶೇಷ ನ್ಯಾಯಾಲಯದಲ್ಲಿ ಸೋಮವಾರ ಖಾಸಗಿ ದೂರು ದಾಖಲಾಗಿದೆ.ಹಿರಿಯ ವಕೀಲ ಬಾಲನ್ ಅವರು ದೂರು ದಾಖಲಿಸಿದ್ದಾರೆ.

ಮಂಗಳವಾರ ಮಧ್ಯಾಹ್ನಪ್ರಕರಣದ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.

‘ಅಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ರೂಪಾಯಿ ಹಣ ವೆಚ್ಚ ಮಾಡಲಾಗಿದೆ. ಇದಕ್ಕೆ ಅಕ್ರಮ ಹಣ ಬಳಕೆ ಮಾಡಲಾಗಿದೆ. ಈ ಹಣ ಎಲ್ಲಿಂದ ಬಂತು ಎಂಬ ಬಗ್ಗೆ ತನಿಖೆ ನಡೆಯಬೇಕು. ಅನರ್ಹ ಶಾಸಕರಿಂದಲೇ ಬಿಜೆಪಿ ಸರ್ಕಾರ ರಚನೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರುಹೇಳಿಕೆ ನೀಡಿದ್ದಾರೆ.ಅನರ್ಹ ಶಾಸಕರು ಬಿಜೆಪಿ ಸೇರಿದ ಕೂಡಲೇ ಮಂತ್ರಿಗಳಾಗುತ್ತಾರೆ ಎಂದೂ ಹೇಳಿದ್ದಾರೆ. ರಾಜಕೀಯ ಪಕ್ಷಗಳಿಗೆ ಭಯೋತ್ಪಾದಕ ಶಕ್ತಿಗಳಿಂದ ಹಣ ಬರುತ್ತಿದೆ ಎಂಬ ಆರೋಪವಿದೆ. ಈ ಹಣದ ಮೂಲದ ಬಗ್ಗೆ ತನಿಖೆ ನಡೆಯಬೇಕು’ ಎಂದು ಬಾಲನ್ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.