ಬೆಂಗಳೂರು: ನಗರದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿರುವ ವಿಚಾರವನ್ನು ಪ್ರಸ್ತಾಪಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

‘ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ ಅವರ ಆದಿಯಾಗಿ ಎಲ್ಲರೂ ಸೆರೆಸಿಕ್ಕ ಉಗ್ರರಿಗೆ ಅಮಾಯಕ ಪಟ್ಟ ಕಟ್ಟಿದ ಕಾರಣ, ಇಂದು ಬೆಂಗಳೂರಿನ ಶಾಲೆಗಳು ಬಾಂಬ್ ಬೆದರಿಕೆಯನ್ನು ಎದುರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ’ ಎಂದು ಬಿಜೆಪಿ ಟೀಕಿಸಿದೆ.

‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ಬೆಲೆ ಏರಿಕೆ ಜತೆಗೆ ಮತಾಂಧರ ಸಂಖ್ಯೆಯೂ ಹೆಚ್ಚಾಗಿದೆ. ಶಾಂತಿ ನೆಮ್ಮದಿಯ ತವರೂರಾಗಿದ್ದ ಕರ್ನಾಟಕದಲ್ಲಿ ಭದ್ರತಾ ವೈಫಲ್ಯಗಳೇ ಜಾಸ್ತಿಯಾಗುತ್ತಿರುವುದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ’ ಎಂದು ಬಿಜೆಪಿ ಕಿಡಿಕಾರಿದೆ.

ಮೂಲ ಪತ್ತೆಗೆ ತಕ್ಷಣವೇ ಕಾರ್ಯಾಚರಣೆ: ಪರಮೇಶ್ವರ

ಬೆಂಗಳೂರು: ನಗರ ಜಿಲ್ಲೆ ಹಾಗೂ ಗ್ರಾಮಾಂತರ ಜಿಲ್ಲೆಯ 15ಕ್ಕೂ ಹೆಚ್ಚು ಶಾಲೆಗಳಿಗೆ ಮುಜಾಹಿದ್ದಿನ್ ಹೆಸರಿನಲ್ಲಿ ಮೇಲ್ ಬಂದಿದೆ. ಕೆಲವು ಅಂತರರಾಷ್ಟ್ರೀಯ ವಿಚಾರ ಪ್ರಸ್ತಾಪಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಶಾಲೆಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣದ ಕುರಿತು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಬಿ.ದಯಾನಂದ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ.

ಬೆದರಿಕೆ ಕರೆ ಬಂದಿರುವ ಎಲ್ಲ ಕಡೆ ಸಿಐಡಿ ಅಧಿಕಾರಿ ಮತ್ತು ಸಿಬ್ಬಂದಿ, ಎಲ್ಲಾ ಸ್ಕ್ವಾಡ್ ಕಳುಹಿಸಿ ತಪಾಸಣೆ ನಡೆಸಬೇಕು. ಕಟ್ಟೆಚ್ಚರಿಕೆ ವಹಿಸುವಂತೆ ನಿರ್ದೇಶಿಸಿದ್ದಾರೆ.
.ಶಾಲೆಗಳಿಗೆ ಬಾಂಬ್ ಬೆದರಿಕೆ: ಗಂಭೀರವಾಗಿ ಪರಿಗಣಿಸಿದ್ದೇವೆ– ಸಚಿವ ಮಧು ಬಂಗಾರಪ್ಪ.ಬೆಂಗಳೂರಿನ ಶಾಲೆಗಳಿಗೆ ಮುಜಾಹಿದ್ದಿನ್ ಹೆಸರಿನಲ್ಲಿ ಬಾಂಬ್ ಬೆದರಿಕೆ.ಬೆಂಗಳೂರಿನ 68 ಶಾಲೆಗಳಿಗೆ ಬಾಂಬ್ ಬೆದರಿಕೆ: ಪೋಷಕರಲ್ಲಿ ಆತಂಕ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.