ಆದಾಯ ಕಡಿಮೆ ಕೃಷಿ ವೆಚ್ಚ ಹೆಚ್ಚಿದ ಕಾರಣ ಬ್ಯಾಂಕ್ ಸಾಲ ಮರುಪಾವತಿ ರೈತನಿಂದ ಸಾಧ್ಯವಾಗುತ್ತಿಲ್ಲ. ಪರಿಣಾಮ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಸರ್ಕಾರವೇ ವ್ಯವಸ್ಥಿತವಾದ ಕೃಷಿ ಸಂಬಂಧಿ ಯೋಜನೆಗಳನ್ನು ರೂಪಿಸುವ ಮೂಲಕ ರೈತರ ಕೈಹಿಡಿಯದೇ ಇದ್ದರೆ ಆತ್ಮಹತ್ಯೆ ಪ್ರಕರಣಗಳಿಗೆ ತಡೆ ಅಸಾಧ್ಯ. ರೈತ ಬೆಳೆದ ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ದರವನ್ನು ಸರ್ಕಾರ ದೊರಕಿಸಿಕೊಡಬೇಕು
ಸಿದಗೌಡ ಮೋದಗಿ ರಾಜ್ಯ ಅಧ್ಯಕ್ಷ ಭಾರತೀಯ ಕೃಷಿಕ ಸಮಾಜ (ಸಂಯುಕ್ತ)
ರೈತರ ಬದುಕು ಹಸನುಗೊಳಿಸಲು ಕೇಂದ್ರ–ರಾಜ್ಯ ಸರ್ಕಾರಗಳು ಪರಿಣಾಮಕಾರಿ ಕಾರ್ಯಕ್ರಮಗಳನ್ನು ರೂಪಿಸಲು ಗಂಭೀರ ಪ್ರಯತ್ನಗಳನ್ನು ಮಾಡದೇ ಇದ್ದರೆ ಆತ್ಮಹತ್ಯೆ ಪ್ರಕರಣಗಳು ಇನ್ನಷ್ಟು ಹೆಚ್ಚಲಿದೆ. ಆರ್ಥಿಕವಾಗಿ ಕುಗ್ಗಿರುವ ರೈತರನ್ನು ಮೇಲೆತ್ತಲು ಕನಿಷ್ಠ ಬೆಂಬಲ ಬೆಲೆಯನ್ನು ಎಲ್ಲ ಬೆಳೆಗಳಿಗೆ ವಿಸ್ತರಿಸಬೇಕು. ರಾಜ್ಯದಲ್ಲಿರುವ ಕೃಷಿ ಬೆಳೆ ಆಯೋಗಕ್ಕೆ ಅಧ್ಯಕ್ಷರನ್ನು ನೇಮಿಸಿ ಸ್ವಾಯತ್ತೆ ನೀಡುವ ಮೂಲಕ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಲು ಮುಂದಾಗಬೇಕು