ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.

ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಹಾಗೂ ಅವರ ಮಗ ಪ್ರಜ್ವಲ್ ಆರೋಪಿಗಳಾಗಿದ್ದಾರೆ.
.ರೇವಣ್ಣ, ಪ್ರಜ್ವಲ್ ಬಂಧನಕ್ಕೆ ಒತ್ತಾಯಿತಿ ಕಾಂಗ್ರೆಸ್ ಪ್ರತಿಭಟನೆ.ಪ್ರಜ್ವಲ್ ರೇವಣ್ಣ ಪ್ರಕರಣ | ಎಸ್ಐಟಿಗೆ ಎಲ್ಲ ದಾಖಲೆ ನೀಡುವೆ: ದೇವರಾಜೇಗೌಡ.
ಪ್ರಕರಣ ದಾಖಲಾಗುವ ಮುನ್ನವೇ ಪ್ರಜ್ವಲ್ ದೇಶದಿಂದ ಪರಾರಿಯಾಗಿದ್ದಾರೆ. ವಿಚಾರಣೆಗೆ ನೋಟಿಸ್ ನೀಡಿದರೂ ಹಾಜರಾಗಿಲ್ಲ.

ಪ್ರಜ್ವಲ್ ವಿದೇಶದಲ್ಲಿರುವ ಬಗ್ಗೆ ಎಸ್ಐಟಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಪ್ರಜ್ವಲ್ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಜಾರಿ ಮಾಡಿ, ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರವಾನಿಸಿದ್ದಾರೆ.

ಲುಕ್‌ಔಟ್ ನೋಟಿಸ್ ಬಳಿಕವೂ ಪ್ರಜ್ವಲ್ ಪತ್ತೆಯಾಗದಿದ್ದರೆ, ಆತನ ಪತ್ತೆಗೆ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗುವ ಸಾಧ್ಯತೆ ಇದೆ.
.ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಲು ಬಿಜೆಪಿ ನೆರವು: ಕಾಂಗ್ರೆಸ್ ಆರೋಪ.ಹಾಸನ | ಪ್ರಜ್ವಲ್, ಎಚ್.ಡಿ. ರೇವಣ್ಣ ಬಂಧನಕ್ಕೆ ಒತ್ತಾಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.