ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ನಿರೀಕ್ಷಣಾ ಜಾಮೀನು ಕೋರಿಕೆ ಅರ್ಜಿ ಹಿಂಪಡೆಯಲು ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.

ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು, 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ಶುಕ್ರವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಅರುಣ್, 'ಅರ್ಜಿ ಹಿಂಪಡೆಯಲು ನಿರ್ಧರಿಸಿದ್ದೇವೆ. ಇದನ್ನು ಪುರಸ್ಕರಿಸಬೇಕು' ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದನ್ನು ಮಾನ್ಯ ಮಾಡಿದ ಪೀಠವು, 'ಅರ್ಜಿ ಇತ್ಯರ್ಥಪಡಿಸಲಾಗಿದೆ' ಎಂದು ಆದೇಶಿಸಿತು. ವಿಶೇಷ ಪ್ರಾಸಿಕ್ಯೂಟರ್ ರವಿವರ್ಮ ಕುಮಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.