ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಫುಡ್ ಪಾರ್ಕ್‌ಗಳನ್ನು ರೈತರು ಸಮರ್ಪಕವಾಗಿ ಬಳಸಿಕೊಂಡು, ಸುಮಾರು ₹ 1 ಲಕ್ಷ ಕೋಟಿ ಮೌಲ್ಯದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳಿಗೆ ಏಕೀಕೃತ ಬ್ರ್ಯಾಂಡ್‌ನೊಂದಿಗೆ ಮಾರುಕಟ್ಟೆ ಕಲ್ಪಿಸುವ ಕೆಲಸವನ್ನು ಪರಸ್ಪರ ಸಮನ್ವಯದಲ್ಲಿ ವಿವಿಧ ಇಲಾಖೆಗಳು ಸಾಧಿಸಬೇಕು’ ಎಂದು ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಹೇಳಿದರು.

ರೈತರ ಉತ್ಪನ್ನಗಳಿಗೆ ಏಕೀಕೃತ ಬ್ರ್ಯಾಂಡಿಂಗ್ ಒದಗಿಸುವ ಉದ್ದೇಶದಿಂದ ಗುರುವಾರ ಆಯೋಜಿಸಲಾಗಿದ್ದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಬಾಗಲಕೋಟೆ, ಹಿರಿಯೂರು, ಜೇವರ್ಗಿ ಮತ್ತು ಮಾಲೂರು ತಾಲ್ಲೂಕುಗಳಲ್ಲಿ ಸ್ಥಾಪಿಸಿರುವ ಫುಡ್ ಪಾರ್ಕ್‌ಗಳನ್ನು ಬಳಸಿಕೊಳ್ಳಬೇಕು’ ಎಂದರು.

‘ಅಗತ್ಯವಿರುವ ತಂತ್ರಜ್ಞಾನ ಆಧರಿಸಿ ಎಲ್ಲ 31 ಜಿಲ್ಲೆಗಳ ಬೆಳೆಗಳಿಗೆ ಈ ಫುಡ್ ಪಾರ್ಕ್‌ಗಳನ್ನು ವಿಂಗಡಿಸಬೇಕು. ತ್ವರಿತವಾಗಿ ಹಾಳಾಗುವ ಕೃಷಿ, ತೋಟಗಾರಿಕೆ ಉತ್ಪನ್ನಗಳನ್ನು ಸಂಸ್ಕರಿಸಿ, ಮೌಲ್ಯವರ್ಧನೆ ಚಟುವಟಿಕೆಗಳಲ್ಲಿ ರೈತರನ್ನು ತೊಡಗಿಸಬೇಕು. ರಫ್ತು ಉತ್ತೇಜಿಸಿ, ಉದ್ಯೋಗ ಸೃಜನೆ, ರೈತರ ಆದಾಯ ಹೆಚ್ಚಳಕ್ಕೆ ರೂಪುರೇಷೆ ಸಿದ್ಧಪಡಿಸಿಕೊಂಡು ಅನುಷ್ಠಾನಗೊಳಿಸಬೇಕು’ ಎಂದೂ ಸಲಹೆ ನೀಡಿದರು.

‘ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿರುವ ರಾಜ್ಯ ಉಗ್ರಾಣ ನಿಗಮದ ಗೋದಾಮುಗಳನ್ನು ಫುಡ್ ಪಾರ್ಕ್‌ಗಳ ಜೊತೆ ಮ್ಯಾಪಿಂಗ್ ಮಾಡಿ ಕೃಷಿ ಉತ್ಪನ್ನಗಳನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ ಮಾರುಕಟ್ಟೆ ಕಲ್ಪಿಸಬೇಕು. ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳ ಸದಸ್ಯರನ್ನು ಈ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಅವರ ಕೌಶಲ ಹೆಚ್ಚಿಸಬೇಕು. ಬ್ಯಾಂಕುಗಳು, ಉದ್ಯಮಿಗಳ ನಡುವೆಯೂ ಸಮನ್ವಯ ಸಾಧಿಸಬೇಕು’ ಎಂದರು.

ಕೃಷಿ ಇಲಾಖೆಯ ಕಾರ್ಯದರ್ಶಿ ವಿ. ಅನ್ಬುಕುಮಾರ್, ‘ಕೃಷಿ, ತೋಟಗಾರಿಕೆ, ಪಶುಸಂಗೋಪನಾ ವಿಶ್ವವಿದ್ಯಾಲಯಗಳು, ಕೃಷಿ ವಿಜ್ಞಾನ ಕೇಂದ್ರಗಳಲ್ಲಿನ ತಜ್ಞರು ಆಹಾರ ಯೋಜನೆಗಳ ತಯಾರಿಕೆ, ಮಾರುಕಟ್ಟೆ ಕಾರ್ಯದಲ್ಲಿ ಭಾಗಿಯಾಗಬೇಕು’ ಎಂದರು.

ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.