ಬೆಂಗಳೂರು: ಭ್ರಷ್ಟಾಚಾರದ ಆರೋಪಗಳನ್ನು ಹೊತ್ತಿರುವ ಟಿ. ಶ್ಯಾಂ ಭಟ್ ಅವರನ್ನು ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ನೇಮಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ನಂಬಿಕೆಗೆ ಚ್ಯುತಿ ತಂದಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ದೂರಿದರು.

ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ಭ್ರಷ್ಟ ಬಿಜೆಪಿ ಸರ್ಕಾರದಿಂದ ಬೇಸತ್ತ ರಾಜ್ಯದ ಜನರು ಮುಂದಿನ ದಿನಗಳಲ್ಲಾದರೂ ತಾವು ನೆಮ್ಮದಿಯಿಂದ ಜೀವನ ನಡೆಸುವ ಸಲುವಾಗಿ ಬದಲಾವಣೆ ಬಯಸಿದ್ದರು. ಶ್ಯಾಂ ಭಟ್ ನೇಮಕ ಮಾಡುವ ಮೂಲಕ ಸಿದ್ದರಾಮಯ್ಯ ಅವರು ಭ್ರಷ್ಟರಿಗೆ ಮಣೆ ಹಾಕಿರುವ ಕ್ರಮ ಸರಿಯಲ್ಲ’ ಎಂದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿ ಶ್ಯಾಮ್ ಭಟ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷರನ್ನಾಗಿ ನೇಮಿಸಿದ್ದರು. ಕೆಪಿಎಸ್‌ಸಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದ ಆರೋಪಗಳು ಬಂದಿದ್ದವು. ಈಗ ಮಾನವ ಹಕ್ಕುಗಳ ಆಯೋಗಕ್ಕೆ ನೇಮಿಸಲಾಗಿದೆ. ರಾಜ್ಯದ ಯಾವ ಜನರ ಮಾನವ ಹಕ್ಕುಗಳನ್ನು ಇವರು ರಕ್ಷಿಸುತ್ತಾರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಇವರನ್ನು ನೇಮಕ ಮಾಡುವ ಮುಖೇನ, ಸಿದ್ದರಾಮಯ್ಯ ತಾವು ಭ್ರಷ್ಟರ ಪರ ಎಂಬ ಸಂದೇಶ ನೀಡಲು ಹೊರಟಿದ್ದಾರೆಯೇ ಎಂದು ಅವರು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.