ನವದೆಹಲಿ: ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿ) ಅನುಷ್ಠಾನಗೊಳಿಸುತ್ತಿರುವ ₹8,005 ಕೋಟಿ ವೆಚ್ಚದ ‘ಶರಾವತಿ ಪಂಪ್ಡ್ ಸ್ಟೋರೇಜ್’ ಯೋಜನೆಯ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್ಗೆ) ಕೇಂದ್ರ ವಿದ್ಯುತ್ ಪ್ರಾಧಿಕಾರ ಶುಕ್ರವಾರ ಅನುಮೋದನೆ ನೀಡಿದೆ.

ವಿದ್ಯುತ್ ಉತ್ಪಾದನೆಗೆ ಬಳಸಿದ ನೀರನ್ನು ಮತ್ತೆ ಮತ್ತೆ ಪಂಪ್ಗಳ ಮೂಲಕ ಹಿಂದಕ್ಕೆ ಕೊಂಡೊಯ್ದು, ತಲಾ 250 ಮೆಗಾವಾಟ್ ಸಾಮರ್ಥ್ಯದ ಎಂಟು ಜಲ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಬಳಸುವ ಯೋಜನೆ ಇದು. ಒಟ್ಟು 2,000 ಮೆಗಾವಾಟ್ ವಿದ್ಯುತ್ ಉತ್ಪಾದನೆಗೆ ಯೋಜನೆ ರೂಪಿಸಲಾಗಿದೆ. ದೇಶದ ಅತಿದೊಡ್ಡ ‘ಪಂಪ್ಡ್ ಸ್ಟೋರೇಜ್’ ವಿದ್ಯುತ್ ಉತ್ಪಾದನಾ ಘಟಕವಾಗಲಿರುವ ಈ ಯೋಜನೆಗೆ ದಾಖಲೆ ಅವಧಿಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ವಿದ್ಯುತ್ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರದ ಅವಧಿಯಲ್ಲಿ ಇಂಧನ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ₹ 4,862.89 ಕೋಟಿ ವೆಚ್ಚದ ‘ಶರಾವತಿ ಪಂಪ್ಡ್ ಸ್ಟೋರೇಜ್’ ಯೋಜನೆಯ ಪ್ರಸ್ತಾವವನ್ನು ಸಿದ್ಧಪಡಿಸಲಾಗಿತ್ತು. 2019ರ ಸೆಪ್ಟೆಂಬರ್ನಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಈ ಯೋಜನೆಯ ಡಿಪಿಆರ್ಗೆ ಒಪ್ಪಿಗೆ ನೀಡಲಾಗಿತ್ತು.

ನಾಲ್ಕೂವರೆ ವರ್ಷಗಳ ಕಾಲ ನನೆಗುದಿಗೆ ಬಿದ್ದಿದ್ದ ಯೋಜನೆ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಪುನಃ ಚುರುಕು ಪಡೆದಿತ್ತು. ಪಶ್ಚಿಮ ಘಟ್ಟ ಮತ್ತು ಶರಾವತಿ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಬರಲಿದೆ.

ಈ ಯೋಜನೆಯನ್ನು ಲಿಂಗನಮಕ್ಕಿ ಜಲಾಶಯದ ಕೆಳಭಾಗದಲ್ಲಿರುವ ಶಿವಮೊಗ್ಗ ಜಿಲ್ಲೆಯ ತಲಕಳಲೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪ ಜಲಾಶಯಗಳ ಮಧ್ಯ ಭಾಗದಲ್ಲಿ ಅನುಷ್ಠಾನಕ್ಕೆ ತರುವ ಪ್ರಸ್ತಾವವಿದೆ. ಇದಕ್ಕಾಗಿ ಭೂಗರ್ಭದೊಳಗೆ ಹಲವು ಕಿ.ಮೀ. ಉದ್ದದ ಸುರಂಗಗಳನ್ನು ಕೊರೆದು 250 ಮೆಗಾವಾಟ್ ಸಾಮರ್ಥ್ಯದ ಎಂಟು ವಿದ್ಯುತ್ ಉತ್ಪಾದನಾ ಘಟಕಗಳನ್ನು ನಿರ್ಮಿಸಲಾಗುತ್ತದೆ. ಶೇಕಡ 95ರಷ್ಟು ನಿರ್ಮಾಣ ಕಾಮಗಾರಿಗಳು ರಕ್ಷಿತಾರಣ್ಯದ ವ್ಯಾಪ್ತಿಯ ಭೂಗರ್ಭದೊಳಕ್ಕೆ ನಡೆಯಲಿವೆ.

ಅರ್ಜಿ ವಜಾಗೊಳಿಸಿದ್ದ ‘ಸುಪ್ರೀಂ’: ಈ ಯೋಜನೆಯ ಟೆಂಡರ್ ಪ್ರಕ್ರಿಯೆ ಪ್ರಶ್ನಿಸಿ ‘ಎಲ್ ಆ್ಯಂಡ್ ಟಿ’ ಕಂಪನಿ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮೇ ತಿಂಗಳಲ್ಲಿ ವಜಾಗೊಳಿಸಿತ್ತು.

ಆರಂಭದಲ್ಲಿ ಟೆಂಡರ್ ಪ್ರಕ್ರಿಯೆಯಿಂದ ದೂರ ಉಳಿದಿದ್ದ ಎಲ್ ಆ್ಯಂಡ್ ಟಿ ಕಂಪನಿ, ‘ಟೆಂಡರ್ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಲಾಗಿದೆ’ ಎಂದು ಆಕ್ಷೇಪಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು.

ರಿಟ್ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ʼಟೆಂಡರ್ನಲ್ಲಿ ಪಾಲ್ಗೊಳ್ಳದ ಅರ್ಜಿದಾರರು ಟೆಂಡರ್ ಪ್ರಕ್ರಿಯೆ ತಡೆಯುವಂತೆ ಮನವಿ ಮಾಡುವುದು ಸೂಕ್ತವಲ್ಲʼ ಎಂಬ ಅಭಿಪ್ರಾಯದೊಂದಿಗೆ ಅರ್ಜಿಯನ್ನು ವಜಾಗೊಳಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಕಂಪನಿಯು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಕಡಿಮೆ ದರ ನಮೂದಿಸಿದ್ದ ಮೇಘಾ ಎಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ (ಎಂಇಐಎಲ್) ಕಂಪನಿಯು ಟೆಂಡರ್ ತನ್ನದಾಗಿಸಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.