ತುಮಕೂರು: ‘ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಚೆನ್ನೈನಿಂದ ಬಂದ ಮೇಲೆ ಸೋಂಕು ತಗುಲಬಾರದು ಎಂದು ಹೆಚ್ಚಿನ ನಿಗಾವಹಿಸಿದ್ದೆವು. ಆದರೂ ಸಹ ಅವರಿಗೆ ಸೋಂಕು ತಗುಲಿದೆ’ ಎಂದು ಸಿದ್ಧಗಂಗಾ ಮಠದ ಅಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದ್ದಾರೆ.

ಚೆನ್ನೈನ ರೇಲಾ ಆಸ್ಪತ್ರೆ, ಸಿದ್ಧಗಂಗಾ ಆಸ್ಪತ್ರೆ ಮತ್ತು ಬಿಜಿಎಸ್ ಆಸ್ಪತ್ರೆಯ ವೈದ್ಯರ ಮಾರ್ಗದರ್ಶನದಲ್ಲಿ ಚಿಕಿತ್ಸೆ ನಡೆಯುತ್ತಿದೆ. ಬೇರೆ ಆಸ್ಪತ್ರೆಗೆ ದಾಖಲಿಸುವ ಅಗತ್ಯ ಇಲ್ಲ. ಮಠದಲ್ಲಿಯೇ ಉತ್ತಮ ರೀತಿಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಶ್ರೀಗಳಿಗೆ ವಿಶ್ರಾಂತಿಯ ಅವಶ್ಯಕತೆ ಇದೆ. ಭಕ್ತರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

ಭಾನುವಾರ ಮಾಧ್ಯಮದವರಿಗೆ ಶಿವಕುಮಾರ ಸ್ವಾಮೀಜಿ ಅವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಹಳೇ ಮಠದಲ್ಲಿರುವ ಸ್ವಾಮೀಜಿ ಅವರ ಕೊಠಡಿಯನ್ನು ವಿಶೇಷ ವಾರ್ಡ್ ರೀತಿ ರೂಪಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.