ಬೆಂಗಳೂರು: ‘ಹಾಸನ ಜಿಲ್ಲೆಯ ಬಿಜೆಪಿ ಮುಖಂಡ ದೇವರಾಜೇಗೌಡ ಅಶ್ಲೀಲ ವಿಡಿಯೊ ಒಳಗೊಂಡ ಪೆನ್ಡ್ರೈವ್ಗಳನ್ನು ವ್ಯಾಪಾರಕ್ಕೆ ಇಟ್ಟಿದ್ದಾರೆ’ ಎಂದು ಮಾಜಿ ಸಚಿವ ಎಲ್.ಆರ್. ಶಿವರಾಮೇಗೌಡ ಆರೋಪಿಸಿದರು.

ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ‘ಪೆನ್ಡ್ರೈವ್ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ನನ್ನ ಪಾತ್ರ ಇಲ್ಲ. ಪ್ರಜ್ವಲ್ ಪ್ರಕರಣ ಹೊರಬಂದ ಬಳಿಕ ನನ್ನನ್ನು ಸಂಪರ್ಕಿಸಿದ್ದ ಅವರು, ಶಿವಕುಮಾರ್ ಅವರನ್ನು ಭೇಟಿ ಮಾಡಿಸುವಂತೆ ಕೋರಿದ್ದರು. ಹಾಗಾಗಿ, ದೂರವಾಣಿಯಲ್ಲಿ ಮಾತನಾಡಿದ್ದೆ. ಅದೇ ದೊಡ್ಡ ಅಪರಾಧವಾಗಿದೆ’ ಎಂದರು.

‘ಡಿ.ಕೆ. ಶಿವಕುಮಾರ್ ಜತೆಗಿನ ಮಾತುಕತೆಯನ್ನು ಪೂರ್ಣ ಪ್ರಮಾಣದಲ್ಲಿ ಬಹಿರಂಗಪಡಿಸಿಲ್ಲ. ತನಗೆ ಬೇಕಾದಷ್ಟು ಹೊರಗೆ ಬಿಟ್ಟು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ಅವ ಮಹಾನ್ ಮೋಸಗಾರ. ಆತನ ಜತೆಗೆ ಜನರು ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು. ಪೆನ್ಡ್ರೈವ್ ಪ್ರಕರಣದ ದಿಕ್ಕು ತಪ್ಪಿಸಲು ಕಾಣದ ಕೈಗಳು ಯತ್ನಿಸುತ್ತಿವೆ’ ಎಂದು ದೂರಿದರು.

‘ನಾನು ಬಿಜೆಪಿಗೆ ರಾಜೀನಾಮೆ ನೀಡಿದ್ದು, ವಿಜಯೇಂದ್ರ ಅವರಿಗೆ ಪತ್ರ ಕಳುಹಿಸಿರುವೆ. ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.