ಬೆಂಗಳೂರು: ಹೈಕೋರ್ಟ್ ನಾಳೆಯೇ ಲಸಿಕೆ ನೀಡಬೇಕು ಎನ್ನುತ್ತದೆ. ಕಂಪನಿಗಳು ಅಗತ್ಯ ಪ್ರಮಾಣದಷ್ಟು ಲಸಿಕೆಯನ್ನು ತಯಾರು ಮಾಡದಿದ್ದರೆ ನಾವು ನೇಣು ಹಾಕಿಕೊಳ್ಳಬೇಕಾ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪ್ರಶ್ನಿಸಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು(ಕೇಂದ್ರ ಸರ್ಕಾರ) ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಸಾಂಕ್ರಾಮಿಕವನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡಿಲ್ಲ ಎಂದು ಹೇಳಿದರು.

ಸದಾನಂದಗೌಡ ಹೇಳಿದ್ದೇನು?:ಲಸಿಕೆ ತಯಾರಿಕೆಗೆ ಕೆಲವು ರಾಷ್ಟ್ರಗಳಿಂದ ಕಚ್ಚಾ ಸಾಮಗ್ರಿ ಬರುವುದು ತಡವಾಗಿದ್ದರಿಂದ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ. ನಾಳೆ ಲಸಿಕೆ ಕೊಡಿ ಎಂದು ನ್ಯಾಯಾಲಯ ಹೇಳಿದರೆ ಹೇಗೆ ಸಾಧ್ಯ? ಲಸಿಕೆಯೇ ತಯಾರಾಗದಿದ್ದರೆ ನಾವು ನೇಣು ಹಾಕಿಕೊಳ್ಳಲು ಆಗುತ್ತದಾ ಎಂದು ಖಾರವಾಗಿ ಪ್ರಶ್ನಿಸಿದರು.

ಆರಂಭದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಸಂದರ್ಭದಲ್ಲಿ ವಿರೋಧ ಪಕ್ಷಗಳ ಅಪ ಪ್ರಚಾರದಿಂದ ಜನರಯ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರಲಿಲ್ಲ. ಶೇ 52ರಷ್ಟ ಮಂದಿ ಮಾತ್ರ ಲಸಿಕೆ ತೆಗೆದುಕೊಂಡರು. ಇದರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊಡಲು ತೀರ್ಮಾನಿಸಲಾಯಿತು. ಆ ವೇಳೆಗೆ ಎರಡನೇ ಅಲೆ ಜೋರಾಯಿತು. ಆಗ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಲು ಬಂದರು. ಇದರಿಂದ ಲಸಿಕೆ ಕೊರತೆ ಆಯಿತು. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲು ಹಿನ್ನಡೆ ಆಗಿದೆ. ಕೆಲವೇ ದಿನಗಳಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಾಗಲಿದೆ ಎಂದು ಸದಾನಂದಗೌಡ ಹೇಳಿದರು.

ನಮ್ಮಿಂದ ತಪ್ಪಾಗಿದೆ: ಆಮ್ಲಜನಕ ಕೊರತೆ ವಿಚಾರದಲ್ಲಿ ನಮ್ಮಿಂದ ತಪ್ಪಾಗಿದೆ. ಇದರಿಂದಾಗಿ ಕೆಲವು ಕಡೆಗಳಲ್ಲಿ ರೋಗಿಗಳು ಮೃತಪಟ್ಟಿದ್ದಾರೆ. ಇದರಲ್ಲಿ ರಾಜಕಾರಣ ಬೆರೆಸಬಾರದು. ರಾಜಕಾರಣದಲ್ಲೂ ಅಂತಃಕರಣ ಇದೆ ಎಂಬುದನ್ನು ತೋರಿಸಬೇಕಾಗಿದೆ ಎಂದರು.

ಕೊರೊನಾ ಮೊದಲ ಅಲೆಯ ವೇಳೆಯಲ್ಲಿ ಆಮ್ಲಜನಕದ ಕೊರತೆ ಆಗಿರಲಿಲ್ಲ. ಎರಡನೇ ಅಲೆಯ ವೇಳೆ ಕೊರತೆ ಆಗಿದೆ ಎಂಬುದನ್ನು ಒಪ್ಪಿಕೊಂಡರು. ರಾಜ್ಯಕ್ಕೆ 1015 ಮೆಟ್ರಿಕ್ ಟನ್ ಆಮ್ಲಜನಕವನ್ನು ಕೇಂದ್ರ ಸರ್ಕಾರ ನಿಗದಿ ಮಾಡಿದೆ. ಅದರಲ್ಲಿ 500 ಮೆಟ್ರಿಕ್ ಟನ್ ಕಂಟೈನರ್ ಇಂದೇ ರಾಜ್ಯಕ್ಕೆ ಬರಲಿದೆ ಎಂದು ಹೇಳಿದರು.

ಇದನ್ನೂ ಓದಿ.. ನ್ಯಾಯಾಧೀಶರು ಸರ್ವಜ್ಞರಲ್ಲ: ಸಚಿವ ಸಿ.ಟಿ. ರವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.