ಬೆಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್ ಬುಧವಾರ ಮಹಿಳಾ ಆಯೋಗಕ್ಕೆ ಭೇಟಿ ನೀಡಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.

ಶ್ರುತಿ ಹರಿಹರನ್ ಮಾಡಿದ್ದ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು. ಈ ಸಂಬಂಧಹೇಳಿಕೆ ನೀಡುವಂತೆ ಮಹಿಳಾ ಆಯೋಗ ಶ್ರುತಿಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ತಮ್ಮ ವಕೀಲರೊಂದಿಗೆ ನ್ಯಾಯಾಲಯಕ್ಕೆ ಆಗಮಿಸಿದ ಶ್ರುತಿ ಹರಿಹರನ್ ವಿಸ್ಮಯ ಚಿತ್ರಿಕರಣದ ವೇಳೆ ನಡೆದ ಘಟನಾವಳಿಗಳನ್ನು ಆಯೋಗದ ಮುಂದೆಹಂಚಿಕೊಂಡರು.

ಮಾಧ್ಯಮದವರ ಜತೆ ಮಾತನಾಡಿದ ಶ್ರುತಿ ಹರಿಹರನ್ ತಾವು ಮಾಡಿರುವಆರೋಪಕ್ಕೆ ಸೂಕ್ತ ಸಾಕ್ಷ್ಯಗಳಿವೆ, ಈಗಾಗಲೇ ನ್ಯಾಯಾಲಯಕ್ಕೆ ವಿಡಿಯೊ ಸಲ್ಲಿಸಲಾಗಿದೆ ಆದ್ದರಿಂದ ಅದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಅವರುಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.