ಬೆಂಗಳೂರು: ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು ಬಳಸಬೇಕೆಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತುಗಳನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ. ‘ಮಾತೃ ಭಾಷೆ ಮರೆತಿರುವ ಶಾ ಹಿಂದಿ ಗುಲಾಮಗಿರಿ ಮಾಡುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.

ದೆಹಲಿಯಲ್ಲಿ ಗುರುವಾರ ನಡೆದ ‘ಅಧಿಕೃತ ಭಾಷಾ ಸಂಸದೀಯ ಸಮಿತಿಯ’ 37ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದ ಅಮಿತ್ ಶಾ, ‘ವಿವಿಧ ಭಾಷೆಗಳನ್ನು ಮಾತನಾಡುವ ರಾಜ್ಯಗಳ ನಾಗರಿಕರು ಪರಸ್ಪರ ಸಂವಹನ ನಡೆಸುವಾಗ ಇಂಗ್ಲಿಷ್ಗೆ ಪರ್ಯಾಯವಾಗಿ ಹಿಂದಿಯನ್ನು ಬಳಸಬೇಕು’ ಎಂದು ಹೇಳಿದ್ದರು. ಅಮಿತ್ ಶಾ ಅವರ ಈ ಹೇಳಿಕೆಗೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದು, ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು ಬಳಸಬೇಕೆಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಫರ್ಮಾನು ಹೊರಡಿಸಿರುವುದು ಅತ್ಯಂತ ಆಕ್ಷೇಪಾರ್ಹ ನಡವಳಿಕೆಯಾಗಿದೆ. ಒಬ್ಬ ಸ್ವಾಭಿಮಾನಿ ಕನ್ನಡಿಗನಾಗಿ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಹಿಂದಿ, ಇಂಗ್ಲಿಷ್, ತಮಿಳು, ಮಲೆಯಾಳಂ, ಗುಜರಾತಿ ಸೇರಿದಂತೆ ಯಾವ ಭಾಷೆಗೂ ನಾವು ವಿರೋಧಿಗಳಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ. ಯಾವುದೇ ಒಂದು ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ’ ಎಂದು ಅವರು ತಿಳಿಸಿದ್ದಾರೆ.

‘ನಮ್ಮ ಭಾಷಾ ನಿಲುವು ಮತ್ತು ದೇಶ-ರಾಜ್ಯಗಳ ಸಂಬಂಧವನ್ನು ರಾಷ್ಟ್ರಕವಿ ಕುವೆಂಪು ಅವರು ದಶಕಗಳ ಹಿಂದೆಯೇ ಸ್ಪಷ್ಟವಾಗಿ ವ್ಯಾಖ್ಯಾನಿಸಿದ್ದಾರೆ. "ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ" ಎನ್ನುವ ಕವಿ ನುಡಿಯೇ ನಮ್ಮ ಭಾಷಾ ಸಿದ್ಧಾಂತ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

‘ಗುಜರಾತಿನಿಂದ ಬಂದಿರುವ ಅಮಿತ್ ಶಾ ಅವರ ಮಾತೃಭಾಷೆ ಗುಜರಾತಿ. ಇವರು ತಮ್ಮ ಮಾತೃಭಾಷೆಯನ್ನೇ ಕಡೆಗಣಿಸಿ ಹಿಂದಿ ಭಾಷೆಯ ಗುಲಾಮಗಿರಿ ಮಾಡುತ್ತಿರುವುದು ವಿಷಾದನೀಯ. ಅಮಿತ್ ಶಾ ಅವರ ತವರು ಗುಜರಾತ್ ರಾಜ್ಯದ ಮಣ್ಣಿನ ಮಗನಾದ ಮಹಾತ್ಮ ಗಾಂಧೀಜಿ ಬಹು ಸಂಸ್ಕೃತಿ, ಬಹುಭಾಷೆಗಳ ಪ್ರತಿಪಾದಕರಾಗಿದ್ದರು. ಆದರೆ ಅಮಿತ್ ಶಾ ಅವರಿಗೆ ಗಾಂಧೀಜಿಯವರಿಗಿಂತ ಏಕ ಸಂಸ್ಕೃತಿ, ಏಕಭಾಷೆಯ ಪ್ರತಿಪಾದಕರಾದ ಹುಸಿ ರಾಷ್ಟ್ರೀಯವಾದಿ ಸಾವರ್ಕರ್ ಪ್ರಿಯರಾಗಿರುವುದು ದುರಂತ’ ಎಂದು ಗೇಲಿ ಮಾಡಿದ್ದಾರೆ.

'ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಹಿಂದಿಯನ್ನು ರಾಷ್ಟ್ರಭಾಷೆ ಎನ್ನುವ ರೀತಿಯಲ್ಲಿ ಬಿಂಬಿಸುವ ಜೊತೆಯಲ್ಲಿ, ರಾಜ್ಯ ಭಾಷೆಗಳನ್ನು ದಮನಿಸುವ ಪ್ರಯತ್ನ ನಡೆಯುತ್ತಲೇ ಇದೆ. ಇದನ್ನು ಹಿಂದಿಯೇತರ ಭಾಷೆಗಳನ್ನಾಡುವ ರಾಜ್ಯಗಳು ಕೂಡಿ ಪ್ರತಿಭಟಿಸುವ ಕಾಲ ಸನ್ನಿಹಿತವಾಗಿದೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ಹಿಂದಿಯನ್ನು ಅಧಿಕೃತ ಸಂಪರ್ಕಭಾಷೆಯಾಗಿ ಬಳಸುವುದಿಲ್ಲ. ಅವುಗಳ ಜೊತೆಯಲ್ಲಿ ಹಿಂದಿಯಲ್ಲಿ ವ್ಯವಹರಿಸಬೇಕೆನ್ನುವುದು ಸಾಂಸ್ಕೃತಿಕ ಭಯೋತ್ಪಾದನೆಯಾಗಿದೆ' ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

‘ಕೇಂದ್ರ ಗೃಹಸಚಿವರ ಈ ಹೇಳಿಕೆ ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿರುವುದು ಮಾತ್ರವಲ್ಲ ಮಾತೃಭಾಷೆಗಳಿಗೆ ಮಾಡಿರುವ ಅವಮಾನವಾಗಿದೆ. ಅನಗತ್ಯ ಘರ್ಷಣೆಗೆ ಎಡೆಮಾಡಿಕೊಡುವ ಈ ಬೇಜವಾಬ್ದಾರಿ ಹೇಳಿಕೆಯನ್ನು ಅಮಿತ್ ಶಾ ಅವರು ತಕ್ಷಣ ಹಿಂದೆಗೆದುಕೊಳ್ಳಬೇಕು‘ ಎಂದು ಅವರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.