ಬೆಳಗಾವಿ: ‘ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಒಂದೇ ಉದ್ದೇಶದಿಂದ ನಾವು ಗ್ಯಾರಂಟಿ ಯೋಜನೆಗಳನ್ನು ತಂದಿಲ್ಲ. ಎಲ್ಲ ಧರ್ಮಗಳು, ಜಾತಿಯವರು, ಬಡವರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬುವ ಉದ್ದೇಶದಿಂದ ಜಾರಿಗೊಳಿಸಿದ್ದೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಮೀಪದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆಗಳು ಜನರಿಗೆ ಇಷ್ಟವಾಗಿಲ್ಲ ಎಂಬುದು ಸುಳ್ಳು. ಇದೇ ಕಾರಣಕ್ಕೆ ತೆಲಂಗಾಣದಲ್ಲಿ ಗೆದ್ದಿದ್ದೇವೆ. ಮಧ್ಯಪ್ರದೇಶದಲ್ಲಿ ಕೂಡ ಬಿಜೆಪಿಯವರು ಗ್ಯಾರಂಟಿ ಘೋಷಿಸಿದ್ದರಿಂದಲೇ ಗೆದ್ದಿದ್ದಾರೆ. ಗೆಲ್ಲುವುದು ಬಿಡುವುದು ನಂತರದ ಲೆಕ್ಕಾಚಾರ. ನಾವು ಬಡವರನ್ನು ಗಮನದಲ್ಲಿಟ್ಟುಕೊಂಡು ಜಾರಿ ಮಾಡಿದ್ದೇವೆ’ ಎಂದೂ ಅವರು ಹೇಳಿದರು.

‘ಕಾಂಗ್ರೆಸ್ಸಿಗರು ರಾಜ್ಯದ ಹಣ ಬಳಸಿ ತೆಲಂಗಾಣದಲ್ಲಿ ಜಾತ್ರೆ ಮಾಡಿದರು’ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ವಿರೋಧ ಪಕ್ಷದ ನಾಯನಕ ಆಯ್ಕೆ ಮಾಡಲು ಆರು ತಿಂಗಳು ತೆಗೆದುಕೊಂಡ ಬಿಜೆಪಿ ನಾಯಕರಿಗೆ, ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ’ ಎಂದರು.

‘ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ– ಜೆಡಿಎಸ್ ಜಂಟಿಯಾಗಿಯಾದರೂ ಹೋರಾಡಲಿ, ಪ್ರತ್ಯೇಕವಾಗಿಯಾದರೂ ಹೋರಾಡಲಿ. ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ’ ಎಂದರು.

ಗೃಹಸಚಿವ ಡಾ. ಜಿ.ಪರಮೇಶ್ವರ, ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹಾಗೂ ಕಾಂಗ್ರೆಸ್ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.