ಮೈಸೂರು: ‘ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದೇನೆ’ ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ತಿಳಿಸಿದರು.

ನಂಜನಗೂಡು ತಾಲ್ಲೂಕು ತಗಡೂರಿನಲ್ಲಿ ಕಾಂಗ್ರೆಸ್ನಿಂದ ಆಯೋಜಿಸಿದ್ದ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮದಲ್ಲಿ ಸೋಮವಾರ ಪಾಲ್ಗೊಂಡಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿ, ‘ಪಕ್ಷ ಸೇರುವ ಬಗ್ಗೆ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ. ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದರು.

‘ತಂದೆ ವಿಶ್ವನಾಥ್ ಅವರಿಗೂ ತಿಳಿಸಿದ್ದೇನೆ. ನಿನ್ನಿಷ್ಟ ಎಂದಿದ್ದಾರೆ. ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್ಗೆ ಸೇರ್ಪಡೆ ಆಗುತ್ತಿರುವೆ. ದಾವಣಗೆರೆ ಕಾರ್ಯಕ್ರಮಕ್ಕೂ ಹೋಗಿದ್ದೆ. ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ವಿಶ್ವಾಸವಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.