ಬೆಂಗಳೂರು: ‘ಹಿಂದಿಯೇತರ ರಾಜ್ಯಗಳು ಪ್ರಾದೇಶಿಕ ಭಾಷೆಯ ಜತೆಯಲ್ಲಿ ಹಿಂದಿಯಲ್ಲಿ ವ್ಯವಹರಿಸಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಸಾಂಸ್ಕೃತಿಕ ಭಯೋತ್ಪಾದನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಅಮಿತ್ ಶಾ ಹೇಳಿಕೆ ವಿರುದ್ಧ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು ಬಳಸಬೇಕೆಂದು ಅಮಿತ್ ಶಾ ಫರ್ಮಾನು ಹೊರಡಿಸಿರುವುದು ಅತ್ಯಂತ ಆಕ್ಷೇಪಾರ್ಹ ನಡವಳಿಕೆ. ಸ್ವಾಭಿಮಾನಿ ಕನ್ನಡಿಗನಾಗಿ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ’ ಎಂದು ಹೇಳಿದ್ದಾರೆ.

‘ಹಿಂದಿ, ಇಂಗ್ಲಿಷ್, ತಮಿಳು, ಮಲಯಾಳ, ಗುಜರಾತಿ ಸೇರಿದಂತೆ ಯಾವ ಭಾಷೆಗೂ ನಾವು ವಿರೋಧಿಗಳಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ. ಯಾವುದೇ ಒಂದು ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ. ನಮ್ಮ ಭಾಷಾ ನಿಲುವು ಮತ್ತು ದೇಶ- ರಾಜ್ಯಗಳ ಸಂಬಂಧವನ್ನು ರಾಷ್ಟ್ರಕವಿ ಕುವೆಂಪು ಅವರು ದಶಕಗಳ ಹಿಂದೆಯೇ ಸ್ಪಷ್ಟವಾಗಿ ವ್ಯಾಖ್ಯಾನಿಸಿದ್ದಾರೆ. ‘ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ’ ಎನ್ನುವ ಕವಿ ನುಡಿಯೇ ನಮ್ಮ ಭಾಷಾ ಸಿದ್ಧಾಂತ’ ಎಂದು ಪ್ರತಿಕ್ರಿಯಿಸಿದ್ದಾರೆ.

ಅಮಿತ್ ಶಾ ಅವರ ಮಾತೃಭಾಷೆ ಗುಜರಾತಿ. ಇವರು ತಮ್ಮ ಮಾತೃಭಾಷೆಯನ್ನೇ ಕಡೆಗಣಿಸಿ ಹಿಂದಿ ಭಾಷೆಯ ಗುಲಾಮಗಿರಿ ಮಾಡುತ್ತಿರುವುದು ವಿಷಾದನೀಯ. ಗುಜರಾತ್ ರಾಜ್ಯದ ಮಣ್ಣಿನ ಮಗನಾದ ಮಹಾತ್ಮಗಾಂಧಿ ಅವರು ಬಹು ಸಂಸ್ಕೃತಿ, ಬಹು ಭಾಷೆಗಳ ಪ್ರತಿಪಾದಕರಾಗಿದ್ದರು. ಆದರೆ ಅಮಿತ್ ಶಾ ಅವರಿಗೆ ಗಾಂಧೀಜಿಯವರಿಗಿಂತ ಏಕ ಸಂಸ್ಕೃತಿ, ಏಕಭಾಷೆಯ ಪ್ರತಿಪಾದಕರಾದ ಹುಸಿ ರಾಷ್ಟ್ರೀಯವಾದಿ ಸಾವರ್ಕರ್ ಪ್ರಿಯರಾಗಿರುವುದು ದುರಂತ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ದೇಶದೆಲ್ಲೆಡೆ ಹಿಂದಿ ಬಳಸಿ: ಅಧಿಕೃತ ಭಾಷಾ ಸಮಿತಿ ಸಭೆಯಲ್ಲಿ ಅಮಿತ್ ಶಾ ಹೇಳಿಕೆ

ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಹಿಂದಿಯನ್ನು ರಾಷ್ಟ್ರಭಾಷೆ ಎಂಬಂತೆ ಬಿಂಬಿಸುವ ಜೊತೆಗೆ, ಪ್ರಾದೇಶಿಕ ಭಾಷೆಗಳನ್ನು ದಮನಿಸುವ ಯತ್ನ ನಡೆಯುತ್ತಲೇ ಇದೆ. ಇದನ್ನು ಹಿಂದಿಯೇತರ ಭಾಷೆಗಳನ್ನಾಡುವ ರಾಜ್ಯಗಳು ಕೂಡಿ ಪ್ರತಿಭಟಿಸುವ ಕಾಲ ಸನ್ನಿಹಿತವಾಗಿದೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ಹಿಂದಿಯನ್ನು ಅಧಿಕೃತ ಸಂಪರ್ಕ ಭಾಷೆಯಾಗಿ ಬಳಸುವುದಿಲ್ಲ ಎಂದು ಹೇಳಿದ್ದಾರೆ.

‘ಈ ಹೇಳಿಕೆಯು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿರುವುದು ಮಾತ್ರವಲ್ಲ, ಮಾತೃಭಾಷೆಗಳಿಗೆ ಮಾಡಿರುವ ಅವಮಾನ. ಅನಗತ್ಯ ಘರ್ಷಣೆಗೆ ಎಡೆಮಾಡಿಕೊಡುವ ಬೇಜವಾಬ್ದಾರಿ ಹೇಳಿಕೆಯನ್ನು ಶಾ ಅವರು ತಕ್ಷಣ ಹಿಂಪಡೆಯಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.